ಚಿತ್ರದುರ್ಗ: ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಈರುಳ್ಳಿ ಲಾರಿಗೆ ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇವರುಗಳು ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ