ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ತಿಳಿಸಲಾಗಿದೆ.
ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಅವರಲ್ಲಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದೆ. ಅವರಲ್ಲಿ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ ವಿಳಾಸ ಪತ್ತೆಯಾಗಿಲ್ಲ. ಅವರ ಫೋನ್‌ಗಳಿಗೆ ಕರೆ ಮಾಡಿದರೆ ಸ್ವಿಚ್ಡ್‌ ಆಫ್‌ ಬರುತ್ತಿದೆ ಎಂದು ಸಚಿವರು ಹೇಳಿದ್ದರು.
ನಾಪತ್ತೆಯಾಗಿರುವ 10 ಜನರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು. ಅವರ ವರದಿ ಬರುವವರೆಗೆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಬರಲು ಅನುಮತಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದರು.
ಈ ವೇಳೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ 9 ಮಂದಿ ಪತ್ತೆಯಾಗಿದ್ದಾರೆ. ಮತ್ತೊಬ್ಬನ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಲಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement