ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಐವರು ಸದಸ್ಯರ ಸಮಿತಿ ರಚಿಸಿದ ಸಂಯುಕ್ತ ಕಿಸಾನ್‌ ಮೋರ್ಚಾ

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ವರ್ಷವಿಡೀ ನಡೆದ ಆಂದೋಲನದಲ್ಲಿ ಮೃತ ರೈತರ ಕುಟುಂಬಗಳಿಗೆ ಪರಿಹಾರ, ರೈತರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಎಲ್ಲ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಶನಿವಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ.
ಸರ್ಕಾರದೊಂದಿಗೆ ಮಾತನಾಡಲು ರಚಿಸಲಾದ ಸಮಿತಿಯ ಸದಸ್ಯರಾಗಿರುವ ರೈತ ಮುಖಂಡರೊಬ್ಬರಿಗೆ ಶುಕ್ರವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಸಮಸ್ಯೆಗಳ ಕುರಿತು ಮಾತುಕತೆ ನಡೆಸಲು ದೂರವಾಣಿ ಕರೆ ಬಂದಿದೆ ಎಂದು ರೈತ ಮುಖಂಡರೊಬ್ಬರು ಹೇಳಿದರು. ಅದರ ಬೆನ್ನಲ್ಲೇ ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದರು.
ಮುಂದಿನ ಕ್ರಮದ ಕುರಿತು ಚರ್ಚಿಸಲು ಎಸ್‌ಕೆಎಂನ ಮುಂದಿನ ಸಭೆಯನ್ನು ಡಿಸೆಂಬರ್ 7 ರಂದು ಕರೆಯಲಾಗಿದೆ. ಕೇಂದ್ರ ಸರ್ಕಾರದಿಂದ ಔಪಚಾರಿಕ ಮತ್ತು ತೃಪ್ತಿಕರ ಪ್ರತಿಕ್ರಿಯೆ ಬರುವವರೆಗೆ ರೈತರ ಆಂದೋಲನವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಸರ್ವಾನುಮತದಿಂದ ನಿರ್ಧರಿಸಲಾಗಿದೆ.
ರೈತರ ಆಂದೋಲನದ ಬಾಕಿ ಇರುವ ಬೇಡಿಕೆಗಳು ಮತ್ತು ಕೇಂದ್ರ ಸರ್ಕಾರದಿಂದ ಔಪಚಾರಿಕ ಪ್ರತಿಕ್ರಿಯೆಯ ಕೊರತೆಯ ಕುರಿತು ಚರ್ಚಿಸಲು ಸಿಂಘು ಗಡಿಯಲ್ಲಿ ನಡೆದ ಮ್ಯಾರಥಾನ್ ಸಭೆಯ ನಂತರ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಮತ್ತು ಬಿಕೆಯು (ಲಖೋವಲ್ ಗ್ರೂಪ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಲ್ ಮಾತನಾಡಿ, ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲು ಬಲ್ಬೀರ್ ಸಿಂಗ್ ರಾಜೇವಾಲ್ (ಪಂಜಾಬ್‌), ಶಿವಕುಮಾರ್ ಕಾಕ್ಕಾ, ಗುರ್ನಾಮ್ ಸಿಂಗ್ ಚಾರುಣಿ (ಹರ್ಯಾಣ), ಯುಧವೀರ್ ಸಿಂಗ್ (ಉತ್ತರ ಪ್ರದೇಶ)ಮತ್ತು ಅಶೋಕ್ ಧಾವಲೆ (ಮಹಾರಾಷ್ಟ್ರ) ಅವರನ್ನೊಳಗೊಂಡ ಐದು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಸಂಯುಕ್ತ ಕಿಸಾನ್‌ ಮೋರ್ಚಾದ ಮುಂದಿನ ಸಭೆ ಡಿಸೆಂಬರ್ 7 ರಂದು. ನಡೆಯಲಿದೆ. ಸಂಯುಕ್ತ ಕಿಸಾನ್‌ ಮೋರ್ಚಾದ ಬೇಡಿಕೆಗಳಿಗೆ ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಎರಡು ದಿನಗಳ ಅಂತರವಿದೆ ಎಂದು ತಿಳಿಸಿದರು.
ರೈತ ಮುಖಂಡ ಅಶೋಕ ಧಾವಲೆ ಮಾತನಾಡಿ, ಧರಣಿ ವೇಳೆ ಮೃತಪಟ್ಟ ರೈತರಿಗೆ ಪರಿಹಾರ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಲಖೀಂಪುರ ಖೇರಿ ಘಟನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement