ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಂತರ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಭಾನುವಾರ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ಭಾನುವಾರ (ನಾಳೆ) ರವೀಂದ್ರ ಕಲಾಕ್ಷೇತ್ರದಲ್ಲಿ 2 ಗಂಟೆಗಳ ಕಾಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವ ಆರ್‌.ಅಶೋಕ ಈ ಮಾಹಿತಿ ನೀಡಿದ್ದಾರೆ. ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಕೆಲಸವನ್ನು ಮಾಡುತ್ತೇವೆ. ನಟ ಶಿವರಾಂ ಅವರ ನಿಧನ ಕರ್ನಾಟಕಕ್ಕೆ ಶೋಕ ತಂದೊಡ್ಡಿದ್ದು, ಅವರ ಹೆಸರು ಚಿರಸ್ಥಾಯಿಯಾಗಿರುವಂತೆ ಕೆಲಸ ಮಾಡುತ್ತೇವೆ. ಯಾವುದಾದರೂ ಕಟ್ಟಡ, ರಸ್ತೆಗೆ ಶಿವರಾಂ ಹೆಸರಿಡುತ್ತೇವೆ’’ ಎಂದು ತಿಳಿಸಿದರು.
ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ 2 ತಾಸುಗಳ ಕಾಲ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಶಿವರಾಂ ಅವರ ಕಾರ್ಯಗಳನ್ನು ಸ್ಮರಿಸಿದ ಸಚಿವ ಅಶೋಕ್, ‘‘ಚಿತ್ರರಂಗದ ಬಹಳ ಹಿರಿಯ ನಟರು ಶಿವರಾಂ. ನಾಗರಹಾವು ಸಿನಿಮಾದಿಂದ ಹಿಡಿದು ಇದುವರೆಗೂ ನೂರಾರು ಚಿತ್ರದಲ್ಲಿ ನಟಿಸಿದ್ದಾರೆ. ಸಾಂಸಾರಿಕ ಚಿತ್ರಗಳಲ್ಲಿ ಹೆಚ್ಚು ನಟನೆ ಮಾಡಿದ್ದರು. ಡಾ. ರಾಜ್​ ಕುಮಾರ್ ಜೊತೆ ಮಾಲೆ ಹಾಕಿ ಅಯ್ಯಪ್ಪ ದರ್ಶನ ಮಾಡಿದವರು. ನಮ್ಮ ಆಫೀಸ್ ಗೆ ಬರುತ್ತಿದ್ದರು. ಸ್ವಂತ ಲೈಬ್ರರಿ ಸ್ಥಾಪನೆ ಮಾಡಿದ್ದರು. ತುಂಬಾ ಸಂಭಾವಿತ ಕಲಾವಿದರು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement