ಕನ್ನಡದ ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

posted in: ರಾಜ್ಯ | 0

ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಇಂದು (ಡಿಸೆಂಬರ್​ 5) ಮಧ್ಯಾಹ್ನ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.
ಶಿವರಾಂ ಅವರ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್‌ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದ ಶಿವರಾಂ, ಪಂಚಭೂತಗಳಲ್ಲಿ ಲೀನರಾದರು. ಅಯ್ಯಪ್ಪ ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ ಮತ್ತು ಕೇಸರಿ ವಸ್ತ್ರ ಸಮರ್ಪಿಸಿ ಚಿತಾಗಾರಾದಲ್ಲಿ ಬ್ರಾಹ್ಮಣ ಸ್ಮಾರ್ತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಅಯ್ಯಪ್ಪ ಭಕ್ತರು ಭಜನೆ ಮಾಡಿ ಅಯ್ಯಪ್ಪನಿಗೆ ಇಷ್ಟವಾದ ಕರ್ಪೂರವನ್ನು ಸಮರ್ಪಿಸಿದ
ಈ ಮೊದಲು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಶಿವರಾಂ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಚಿತ್ರರಂಗದ ಹಲವು ಮಂದಿ ಹಿರಿಯ ನಟನ ದರ್ಶನ ಪಡೆದರು.
ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಸಚಿವ ಆರ್. ಅಶೋಕ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement
ಓದಿರಿ :-   ದಾಂಡೇಲಿ: ಮೊಸಳೆ ಎಳೆದೊಯ್ದಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement