ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; 40 ಮಕ್ಕಳಿಗೆ ಸೋಂಕು ದೃಢ

posted in: ರಾಜ್ಯ | 0

ಚಿಕ್ಕಮಗಳೂರು : ರಾಜ್ಯದಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾದ ಬೆನ್ನಿಗೇ ಕೊರೊನಾ ಸೋಂಕು ಸಹ ಹೆಚ್ಚುತ್ತಿದೆ. ಶಾಲೆ, ಕಾಲೇಜುಗಳು ಈಗ ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಿದ್ದು, ಈಗ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್.ಪುರದ ಸಿಗೋಡು ಗ್ರಾಮದಲ್ಲಿರುವ ಜವಾಹರ್‌ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಮೊದಲು ಜವಾಹರ್‌ ನವೋದಯ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ನಂತರ ವಸತಿ ಶಾಲೆಯ ಎಲ್ಲಾ 418 ವಿದ್ಯಾರ್ಥಿಗಳನ್ನೂ ಕೂಡ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಇದೀಗ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಕೊರೊನಾ ಸೋಂಕು ಕಾಣಿಸಿಕೊಂಡಿರುವ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣಗಳು ಕಂಡುಬಂದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಜವಾಹರ್ ನವೋದಯ ವಿದ್ಯಾಲಯ ಸೀಲ್‌ಡೌನ್ ಮಾಡಲಾಗಿದೆ.
ಧಾರವಾಡ, ಹಾಸನ, ಶಿವಮೊಗ್ಗ, ಮಡಿಕೇರಿ ಸೇರಿದಂತೆ ರಾಜ್ಯದ ಹಲವು ವಸತಿ ಶಾಲೆ, ನರ್ಸಿಂಗ್‌ ಕಾಲೇಜುಗಳು ಹಾಗೂ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ