ನಾಗಾಲ್ಯಾಂಡ್‌ನ ಸೋಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಗರಿಕರು ಸೇರಿದಂತೆ 13 ಮಂದಿ ಸಾವು; ತನಿಖೆಗೆ ಸಿಎಂ ಆದೇಶ

ಕೊಹಿಮಾ: ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯ ತಿರು ಗ್ರಾಮ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹದಿಮೂರು ಸಾವುಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ಖಚಿತಪಡಿಸಿದ್ದಾರೆ.
ವರದಿಗಳ ಪ್ರಕಾರ, ಓಟಿಂಗ್ ಗ್ರಾಮದ ಜನರ ಗುಂಪೊಂದು ಪಿಕ್-ಅಪ್ ಮಿನಿ ಟ್ರಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹಲವು ಗಂಟೆಗಳಾದರೂ ಅವರು ಹಿಂತಿರುಗದ ಕಾರಣ ಗ್ರಾಮದ ಸ್ವಯಂಸೇವಕರು ಅವರನ್ನು ಹುಡುಕಲು ಹೋದಾಗ ಟ್ರಕ್‌ನಲ್ಲಿ ಅವರ ಮೃತದೇಹಗಳು ಪತ್ತೆಯಾಗಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.ಇದರಿಂದ ಕೋಪಗೊಂಡ ಸ್ಥಳೀಯರು ಭದ್ರತಾ ಪಡೆಗೆ ಸೇರಿದ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ತನಿಖೆಗೆ ಆದೇಶಿಸಿದ ನಾಗಾಲ್ಯಾಂಡ್‌ ಸಿಎಂ:
ಘಟನೆಯ ಕುರಿತು ಪ್ರತಿಕ್ರಿಯಿಸಿದ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ, ಇದು “ಅತ್ಯಂತ ಖಂಡನೀಯ” ಮತ್ತು “ಉನ್ನತ ಮಟ್ಟದ” ವಿಶೇಷ ತನಿಖಾ ತಂಡವು “ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪ್ರಕರಣವನ್ನು ತನಿಖೆ ಮಾಡುತ್ತದೆ ಎಂದು ಹೇಳಿದ್ದಾರೆ. ಅವರು ಸಮಾಜದ ಎಲ್ಲ ವರ್ಗದವರೂ ಶಾಂತಿಯಿಂದ ಇರಬೇಕೆಂದು ಮನವಿ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಅಧಿಕೃತ ಹೇಳಿಕೆಯಲ್ಲಿ, ಅಸ್ಸಾಂ ರೈಫಲ್ಸ್ “ಬಂಡುಕೋರರ ಚಲನವಲನದ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ” ಪ್ರದೇಶದಲ್ಲಿ ನಿರ್ದಿಷ್ಟ ಕಾರ್ಯಾಚರಣೆಯನ್ನು ಯೋಜಿಸಲಾಗಿದೆ ಎಂದು ಹೇಳಿದರು.
ಘಟನೆ ಮತ್ತು ಅದರ ನಂತರದ ಘಟನೆಗಳಿಗೆ ತೀವ್ರ ವಿಷಾದವಿದೆ. ದುರದೃಷ್ಟಕರ ಜೀವಹಾನಿಯ ಕಾರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ ಮತ್ತು ಕಾನೂನಿನ ಪ್ರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಅಸ್ಸಾಂ ರೈಫಲ್ಸ್ ಹೇಳಿಕೆಯ ಪ್ರಕಾರ, ಘಟನೆಯಲ್ಲಿ ಒಬ್ಬ ಯೋಧ ಮೃತಪಟ್ಟಿದ್ದು, ಇನ್ನು ಕೆಲವರು ತೀವ್ರ ಗಾಯಗೊಂಡಿದ್ದಾರೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ