ಭಾರತದಲ್ಲಿ 50% ಜನರಿಗೆ ಎರಡೂ ಲಸಿಕೆ ಪೂರ್ಣ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ಕಾಣಿಸಿಕೊಂಡು ಭೀತಿ ಸೃಷ್ಟಿ ಮಾಡಿರುವ ನಡುವೆಯೇ ಶೇ. 50 ರಷ್ಟು ಅರ್ಹ ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ದೇಶ ವಿಶ್ವದಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ.
ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ಲಸಿಕೆ ನೀಡಲಾಗುತ್ತಿದ್ದು ಅರ್ಹ ನಾಗರಿಕರ ಪೈಕಿ ಶೇ. 50ರಷ್ಟು ಮಂದಿ ಸಂಪೂರ್ಣವಾಗಿ ಲಸಿಕೆ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್ ಮಾಂಡವೀಯ ಹೇಳಿದ್ದಾರೆ.
ದೇಶದಲ್ಲಿ ಇದುವರೆಗೂ 127,61,83,065 ಡೋಸ್ ಲಸಿಕೆ ನೀಡಲಾಗಿದ್ದು ಇದರಲ್ಲಿ ಶೇಕಡಾ ೫೦ರಷ್ಟು ಮಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಲಸಿಕೆ ಪಡೆದ ಯುವ ಜನರ ಪೈಕಿ 47 ಕೋಟಿ ಪೂರ್ಣಪ್ರಮಾಣದಲ್ಲಿ ಲಸಿಕೆ ಪಡೆದಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement