ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. ಈ ಎಲ್ಲಾ ಅಂಶ ಮುಂದಿಟ್ಟುಕೊಂಡು ನಾಳೆ ಬೆಂಬಲದ ಕುರಿತು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್, ಬಿಜೆಪಿಯಲ್ಲೂ ನಮ್ಮ ಪರ ಇರುವವರು ಇದ್ದಾರೆ. ನಾಯಕರು ಏನೇ ಹೇಳಿದರೂ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಎರಡನೇ ಪ್ರಾಶಸ್ತ್ಯ ಮತ ಜೆಡಿಎಸ್‌ಗೆ ಕೊಡುತ್ತಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿ ಗೆಲ್ಲಲು ಜೆಡಿಎಸ್ ಪಾತ್ರ ಬಹಳ ಮುಖ್ಯವಾಗಿದೆ‌ ಎಂದು ಕುಮಾರಸ್ವಾಮಿ ಹೇಳಿದರು.
ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮೈಸೂರಿನಲ್ಲಿ ಎರಡು ಬಾರಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದಾರೆ. ಈ ಬಾರಿ ಕೂಡ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ನನಗಿದೆ. ವರುಣಾ ಕ್ಷೇತ್ರದಲ್ಲೂ ನಾಯಕರ ಕೊರತೆ ನಡುವೆಯೂ ಸಭೆ ಯಶಸ್ವಿಯಾಗಿದೆ. ಇದೆಲ್ಲವನ್ನು ಗಮನಿಸಿದರೆ ಜೆಡಿಎಸ್ ಮುಂದಿನ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಕಾಣಲಿದೆ ಎಂದರು.
ಚಾಮುಂಡೇಶ್ವರಿ ಕಾಂಗ್ರೆಸ್‌ ಟಿಕೆಟ್ ಜಿಟಿ ದೇವೇಗೌಡರಿಗೆ ಕೊಡಬೇಕಾಗುತ್ತದೆ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು,ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೊಸ ನಾಯಕರ ಹುಡುಕುತ್ತಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement