ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ನವೋದಯ ಶಾಲೆಯ 63 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 456 ಮಂದಿಯಲ್ಲಿ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಆರು ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದಾರೆ.
ಒಟ್ಟು 330 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 29,98,099 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,708 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 38,230 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸೀಗೋಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಒಟ್ಟು 70 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 63 ಮಂದಿ ವಿದ್ಯಾರ್ಥಿಗಳಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಬೆಂಗಳೂರಲ್ಲಿ ಭಾನುವಾರ 256 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಗರದಲ್ಲಿ ಪ್ರಸ್ತುತ 5136 ಸಕ್ರಿಯ ಪ್ರಕರಣಗಳಿದ್ದು, ಇಂದು 214 ಜನರು ಚೇತರಿಸಿಕೊಂಡಿದ್ದಾರೆ.
ಬೆಂಗಳೂರು ನಗರ 256, ಚಿಕ್ಕಮಗಳೂರು 66, ಧಾರವಾಡ 20, ಕೊಡಗು 17, ಮೈಸೂರು 10, ಬಳ್ಳಾರಿ 5, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೀದರ್, ಚಿತ್ರದುರ್ಗ 1, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕಲಬುರಗಿ, ಕೋಲಾರ 2, ದಕ್ಷಿಣ ಕನ್ನಡ 13, ಹಾಸನ 12, ಮಂಡ್ಯ 3, ಶಿವಮೊಗ್ಗ 7, ತುಮಕೂರು 8, ಉಡುಪಿ 5, ಉತ್ತರ ಕನ್ನಡ 14.
ನಿಮ್ಮ ಕಾಮೆಂಟ್ ಬರೆಯಿರಿ