ಬಿಜೆಪಿ ಹಿರಿಯ ನಾಯಕ ಉರಿಮಜಲು ರಾಮ್ ಭಟ್ ನಿಧನ

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿಯ ‘ಭೀಷ್ಮ’ ಎಂದು ಕರೆಸಿಕೊಳ್ಳುತ್ತಿದ್ದ ಉರಿಮಜಲು ಕೆ.ರಾಮ್ ಭಟ್ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಅವರು ಕೆಲವು ದಿನಗಳ ಹಿಂದಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದರು.ಕೊಂಬೆಟ್ಟಿನಲ್ಲಿರುವ ಅವರ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಸಹಕಾರಿ ಮುಂದಾಳು ಹಾಗೂ ಸಮಾಜ ಸೇವಕಿ ಪತ್ನಿ ಸವಿತಾ ಭಟ್, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಕೀಲರಾಗಿದ್ದ ರಾಮ ಭಟ್ ಅವರು, ತಮ್ಮ ಪ್ರೌಢ ಶಿಕ್ಷಣದ ಸಮಯದಲ್ಲಿ ರಾಮ್ ಭಟ್ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಜನಸಂಘದ ನಾಯಕರಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಬಿಜೆಪಿಯ ಮುಂಚೂಣಿ ನಾಯಕರಾಗಿದ್ದ ರಾಮ್ ಭಟ್ ‌ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. 1978 ಮತ್ತು 1983 ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.
ಕ್ಯಾಂಪ್ಕೋ ಅಧ್ಯಕ್ಷರಾಗಿದ್ದರು. ಪುತ್ತೂರು ಪುರಸಭೆಯ ಪ್ರಥಮ ಅಧ್ಯಕ್ಷರಾಗುವ ಮೂಲಕ ಪುತ್ತೂರು ಪುರಸಭೆಯಲ್ಲಿ 1972ರ ದಶಕದಲ್ಲಿ ಭಾರತೀಯ ಜನಸಂಘವನ್ನು ಅಧಿಕಾರಕ್ಕೆ ತಂದಿದ್ದರು. ಕ್ಯಾಂಪ್ಕೋ ಅಧ್ಯಕ್ಷರಾಗಿದ್ದರು.
ಬಿಜೆಪಿಯ ಪ್ರಮುಖ ನಾಯಕರಾಗಿದ್ದ ರಾಮ ಭಟ್‌ ಅವರು, ಅಟಲ್ ಬಿಹಾರಿ ವಾಜಪೇಯಿ, ಲಾಲ್‌ಕೃಷ್ಣ ಅಡ್ವಾಣಿ ಸಹಿತ ಹಲವು ದಿಗ್ಗಜ ನಾಯಕರ ಒಡನಾಟ ಹೊಂದಿದ್ದರು.
1957ರಲ್ಲಿ ಜನಸಂಘದಿಂದ ಮೊದಲ ಸ್ಪರ್ಧೆ ಮಾಡಿದ್ದ ರಾಮ್ ಭಟ್ 2008ರಲ್ಲಿ ಶಿಷ್ಯೆ ಶಕುಂತಲಾ ಶೆಟ್ಟಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದಾಗ ಬಂಡಾಯಕ್ಕೆ ಬೆಂಬಲ ನೀಡಿದ್ದರು. ಬಿಜೆಪಿ ವಿರುದ್ದವೇ ಸ್ವಾಭಿಮಾನಿ ವೇದಿಕೆ ಕಟ್ಟಿದ್ದ ಅವರು 2009ರಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧವೇ ಸ್ಪರ್ಧಿಸಿದ್ದರು.
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮತ್ತೆ ಬಿಜೆಪಿಗೆ ಬೆಂಬಲ ನೀಡಿದ್ದರು. 2019 ರಲ್ಲಿ ಪ್ರಧಾನಿ ಮೋದಿ ಸ್ವತಃ ಕರೆ ಮಾಡಿ ರಾಮ್ ಭಟ್ ಆರೋಗ್ಯ ವಿಚಾರಿಸಿದ್ದರು.

ಪ್ರಮುಖ ಸುದ್ದಿ :-   ಒಪ್ಪಿಗೆಯಿಲ್ಲದೆ ಖಾಸಗಿ ವೀಡಿಯೊ-ಫೋಟೊ ಶೇರ್ ಮಾಡಿದ್ರೆ ಎಫ್‌ಐಆರ್ : ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ

ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಹಾಗೂ ದಕ್ಷತೆಯ ವ್ಯಕ್ತಿತ್ವದ ಮೂಲಕ ಹೆಸರಾಗಿದ್ದರು. ಮಂಗಳೂರಿನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.
ಉರಿಮಜಲು ರಾಮ ಭಟ್‌ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ನಸಂಘ, ನಂತರ ಬಿಜೆಪಿಯ ಪ್ರಭಾವಿ ನಾಯಕರಾಗಿ, ಶಾಸಕರಾಗಿ, ತಳಮಟ್ಟದಿಂದ ಸಂಘಟನೆ ಕಟ್ಟಿದ್ದರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು,ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ. ರಾಮ ಭಟ್ಟರ ನಿಧನಕ್ಕೆ ರಾಜ್ಯ ಬಿಜೆಪಿ ಹಾಗೂ ಹಲವಾರು ನಾಯಕರು ಸಂತಾಪ ಸೂಚಿಸಿದ್ದಾರೆ.

 

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement