ವರಿಷ್ಠರ ಸಲಹೆ ಪಡೆದ ನಂತರವೇ ಸಚಿವ ಸಂಪುಟ ವಿಸ್ತರಣೆ:ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ ಹಾಗೂ ಬೆಳಗಾವಿ ಅಧಿವೇಶನವಿದೆ. ಅದಕ್ಕಾಗಿ ಗಮನಹರಿಸುತ್ತಿದ್ದೇವೆ. ನಂತರ ಈ ಕುರಿತು ವರಿಷ್ಠರ ಜೊತೆ ಚರ್ಚಿಸಿ ಅವರ ಸಲಹೆಯಂತೆ ನಿರ್ಧರಿಸಲಾಗುವುದು ಎಂದರು.
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಲುವಿನ ಬಗ್ಗೆ ಜೆಡಿಎಸ್ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಬೇಕು ಎಂದರು.
ಬಿಜೆಪಿ ಸೇರದ ಕಾರಣ ನನ್ನನ್ನು ಜೈಲಿಗೆ ಕಳುಹಿಸಿದರು ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅವರ ಎಲ್ಲ ಹೇಳಿಕೆಗಳಿಗೆ ನಾನು ಉತ್ತರ ನೀಡಬೇಕಿಲ್ಲ ಎಂದರು.
ಓಮಿಕ್ರಾನ್ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ಮಾಲ್ ಮತ್ತು ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಸಲಹೆಗಳನ್ನು ತಜ್ಞರ ಸಮಿತಿ ಮುಂದಿಟ್ಟು ಅವರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕ್ಲಸ್ಟರ್‌ಗಳಲ್ಲಿ ಸೋಂಕು ಕಂಡುಬಂದಿರು ಕಡೆಗಳಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಅವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement