ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಗೆ ಚಿಂತನೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದ ನಾನಾ ಕಡೆ ದಕ್ಷಿಣ ಆಫ್ರಿಕಾ ಮೂಲದ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಇಬ್ಬರಿಗೆ ಮಾತ್ರ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕದಲ್ಲಿದ್ದವರಿಗೆ ಸೋಂಕು ಕಾಣಿಸಿಕೊಂಡಿಲ್ಲ ಎಂದು ತಿಳಿಸಿದರು.
ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಗಳಿವೆ. ಜಿನೋಮ್ ಸೀಕ್ವೆನ್ಸಿಂಗ್ ಗೆ ಪರಿಣಿತ ವ್ಯವಸ್ಥೆ ಅಗತ್ಯ. ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಓಮಿಕ್ರಾನ್ ಸೋಂಕಿನ ಸಂಶಯವಿದ್ದಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಎನ್ ಸಿಬಿಎಸ್‌ಗೆ ಕಳುಹಿಸಲಾಗುತ್ತಿದೆ. ಶೀಘ್ರದಲ್ಲಿ ಪರೀಕ್ಷೆಯ ವರದಿ ಬರಲಿದೆ ಎಂದರು.
ಓಮಿಕ್ರಾನ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಗಟ್ಟಲು ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜಿನೋಮಿಕ್ ಸ್ವಿಕ್ವೆನ್ಸ್ ಪ್ರಯೋಗಾಲಯಗಳನ್ನು ಹೆಚ್ಚಿಸುವ ಬಗ್ಗೆ ತಜ್ಞರ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗುತ್ತದೆ ಎಂದರು.
ವಿಧಾನಪರಿಷತ್ ಚುನಾವಣೆ ಕುರಿತು ಮಾತನಾಡಿದ ಬೊಮ್ಮಾಯಿ ಅವರು ನಾವು 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ನಮಗೆ ಮತದಾರರಿಂದ ಉತ್ತಮವಾದ ಪ್ರತಿಕ್ರಿಯೆ ಕಂಡುಬರುತ್ತಿದೆ. ನಿರೀಕ್ಷೆಗೂ ಮೀರಿದ ಗೆಲವನ್ನು ಬಿಜೆಪಿ ಕಾಣಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement