ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ

ನವದೆಹಲಿ: ಎಲ್‌ಪಿಜಿ ಅಡುಗೆ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್‌ಗಳು ಭಾರವಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್​ ಸಿಲಿಂಡರ್​ಗಳ ತೂಕವನ್ನೇ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಚಿಸಿದೆ.
14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್​ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಎಲ್​ಪಿಜಿ ಸಿಲಿಂಡರ್​ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿದಾಗ ಅದಕ್ಕೆ ಉತ್ತರ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG) ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು. 14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ಎಲ್​ಪಿಜಿ ಸಿಲಿಂಡರ್​ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ.

ಪ್ರಮುಖ ಸುದ್ದಿ :-   ಏಷ್ಯನ್‌ ಗೇಮ್ಸ್‌ 2026 : ಬಿಲ್ಲುಗಾರಿಕೆಯಲ್ಲಿ 2, ಮಹಿಳಾ ರಿಲೇ ಓಟದಲ್ಲಿ 1 ಚಿನ್ನದ ಪದಕ ಗೆದ್ದ ಭಾರತ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement