ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್​ನಲ್ಲಿ ನಡೆದಿದೆ..
ಪ್ರಸನ್ನಕುಮಾರ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಪ್ರಸನ್ನಕುಮಾರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮಂಗಳವಾರ ಸಂಜೆ 5 ಗಂಟೆಯ ವೇಳೆ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದ ಪ್ರಸನ್ನಕುಮಾರ ಅವರು ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಗುರುತಿಸಿಕೊಂಡಿದ್ದರು.
ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿದ್ದಾರೆ.

5 / 5. 1

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement