ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ನಡೆದಿದೆ..
ಪ್ರಸನ್ನಕುಮಾರ (46) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಪ್ರಸನ್ನಕುಮಾರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮಂಗಳವಾರ ಸಂಜೆ 5 ಗಂಟೆಯ ವೇಳೆ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದ ಪ್ರಸನ್ನಕುಮಾರ ಅವರು ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಗುರುತಿಸಿಕೊಂಡಿದ್ದರು.
ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ