ಅಲ್ವಾರ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಂಬತ್ತು ಶಿಕ್ಷಕರು ಮತ್ತು ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ವರದಿ ಪ್ರಕಾರ, ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ವಿದ್ಯಾರ್ಥಿನಿಯ ತಂದೆ ಕೇಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ, 10 ನೇ ತರಗತಿ ವಿದ್ಯಾರ್ಥಿನಿ, ನಂತರ ತನ್ನ ಶಾಲೆಯ ಪ್ರಾಂಶುಪಾಲರು ಮತ್ತು ಇತರ ಮೂವರು ಶಿಕ್ಷಕರಿಂದ ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿದ್ದಾಳೆ. ಇಬ್ಬರು ಮಹಿಳಾ ಶಿಕ್ಷಕರು ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾಳೆ.
ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಭಿನ್ನ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪೊಲೀಸ್ ತನಿಖೆಯ ಸಮಯದಲ್ಲಿ, ಇನ್ನೂ ಮೂವರು ವಿದ್ಯಾರ್ಥಿನಿಯರು ಮುಂದೆ ಬಂದು ಪ್ರಾಂಶುಪಾಲರು ಮತ್ತು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.
ತನಿಖೆಯ ನಂತರ, ಅಲ್ವಾರ್ನ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರು ಮತ್ತು ಒಂಬತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಮ್ಮ ದೂರಿನಲ್ಲಿ, ಸಂತ್ರಸ್ತರು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಈ ವಿಷಯವನ್ನು ಮಹಿಳಾ ಶಿಕ್ಷಕರಿಗೆ ತಿಳಿಸಿದಾಗ, ಅವರು ಹುಡುಗಿಯರಿಗೆ “ಆಮಿಷ” ನೀಡಿದರು, ಅವರ ಶುಲ್ಕ ಮತ್ತು ಅವರ ಪುಸ್ತಕಗಳಿಗೆ ಹಣ ನೀಡುವ ಆಫರ್ ಮಾಡಿದ್ದಾರೆ ಎಂದು ಸಂತ್ರಸ್ತರಲ್ಲಿ ಒಬ್ಬರು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಯಾರಿಗೂ ದೂರು ನೀಡದಂತೆ ಶಿಕ್ಷಕರು ಸಹ ಕೇಳಿಕೊಂಡಿದ್ದಾರೆ.
ಇದಾದ ನಂತರ, ಮೇಡಂ ನನ್ನನ್ನು ಮೂರು ಶಿಕ್ಷಕರ ಮನೆಗೆ — ಪ್ರಿನ್ಸಿಪಾಲ್ ಸೇರಿದಂತೆ — ಹಲವಾರು ಬಾರಿ ಕರೆದೊಯ್ದರು. ಎಲ್ಲಾ ಶಿಕ್ಷಕರು ಮನೆಯಲ್ಲಿ ಮದ್ಯ ಸೇವಿಸಿದರು. ನಂತರ, ಅವರು ನನ್ನ ಬಟ್ಟೆಗಳನ್ನು ತೆಗೆದು ನನಗೆ ತಪ್ಪುಕೆಲಸ ಮಾಡಿದರು ಎಂದು ಒಬ್ಬಳು ಸಂತ್ರಸ್ತೆ ಹೇಳಿದ್ದಾಳೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ, ಘಟನೆಯ ಬಗ್ಗೆ ದೂರು ನೀಡಲು ಶಾಲೆಗೆ ಹೋದಾಗ, ಪ್ರಾಂಶುಪಾಲರು ತಮ್ಮ ಸಹೋದರ ಮಂತ್ರಿ ಎಂದು ಹೇಳಿದರು ಎಂದು ಸಂತ್ರಸ್ತರೊಬ್ಬರ ತಂದೆ ಹೇಳಿದ್ದಾರೆ. ನಾನು ದೂರು ನೀಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ತಂದೆ ಹೇಳಿದರು.
ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ ಪ್ರಾಂಶುಪಾಲರು ಹೇಳಿದ್ದು, ತನಗೆ ಅಂತಹ ಯಾವುದೇ ಪ್ರಕರಣದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ