ಓಮಿಕ್ರಾನ್-ಕೋವಿಡ್‌ ಕ್ಲಸ್ಟರ್‌; ನಾಳಿನ ಸಚಿವ ಸಂಪುಟ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ತಡೆಗೆ ನಾಳೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಇಂದು, ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಓಮಿಕ್ರಾನ್ ತಡೆಗೆ ಹಾಗೂ ಕೋವಿಡ್‌ ಕ್ಲಸ್ಟರ್‌ಗೆ ಹೊಸ ಮಾರ್ಗಸೂಚಿ ರೂಪಿಸಲಾಗುವುದು. ನಾಳೆ, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಹೊಸ ಮಾರ್ಗಸೂಚಿ ಬಗ್ಗೆ ರಾಜ್ಯಕ್ಕೆ ಹೊಸ ಹೊಸ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಶಾಲೆಗಳಿಗೆ ಸಂಬಂಧಿಸಿದಂತೆಯೂ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.
ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಓಮಿಕ್ರಾನ್ ಕಾಣಿಸಿಕೊಂಡಿದೆ. ಕೆಲ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಹೀಗಾಗಿ, ಮಾರ್ಗಸೂಚಿಗಳನ್ನು ತಂದರೆ ಇಡೀ ರಾಜ್ಯಕ್ಕೆ ತರಬೇಕಾಗುತ್ತಿದೆ. ಕೇಂದ್ರ ಸರ್ಕಾರವು ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇವೆಲ್ಲವನ್ನೂ ಪರಾಮರ್ಶಿಸಿ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಸಂಪುಟ ಸಭೆಯ ಬಳಿಕ ತಜ್ಞರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದರು.
ಶಾಲಾ-ಕಾಲೇಜುಗಳ ವಿದ್ಯಾರ್ಥಿ ನಿಲಯಗಳಿಗೂ ಪ್ರತ್ಯೇಕ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು. ಯಾರೂ ಆತಂಕ ಪಡುವ ಪರಿಸ್ಥಿತಿ ಇಲ್ಲ, ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಗಮನ ನೀಡಿ, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದ್ದೇನೆ.ಪೋಷಕರು ಮತ್ತು ಶಿಕ್ಷಕರಿಗೆ ೨ ಡೋಸ್ ಲಸಿಕೆ ಆಗಿರಬೇಕು ಎಂದು ಅವರು ಹೇಳಿದರು.
ಇಂದು ಅಧಿಕಾರಿಗಳ ಜತೆ ಅನೌಪಚಾರಿಕವಾಗಿ ಸಭೆ ನಡೆಸಿ ನವೆಂಬರ್ ತಿಂಗಳ ಕೋವಿಡ್ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯಲು ನಾಳೆ ಸಚಿವ ಸಂಪುಟ ಸಭೆಯಲ್ಲಿ ಈ ಮಾಹಿತಿಗಳನ್ನಿಟ್ಟು ಚರ್ಚಿಸಿ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ ಮಾಡುತ್ತೇನೆ. ಇಂದಿನ ಸಭೆಯಲ್ಲಿ ವಸತಿ ಶಾಲೆಗಳ ಕೋವಿಡ್ ಪರಿಸ್ಥಿತಿಯ ಬಗ್ಗೆ ವಿವರಗಳನ್ನು ಪಡೆಯಲಾಗುವುದು ಎಂದು ತಿಳಿಸಿದರು.
ಹೊಸ ವರ್ಷಾಚರಣೆ ತೀರ್ಮಾನ ಇಲ್ಲ
ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ನಿರ್ಬಂಧ, ನೈಟ್ ಕರ್ಫ್ಯೂ, ಸೆಮಿ ಲಾಕ್‌ಡೌನ್ ಜಾರಿ ಬಗ್ಗೆಯೂ ಯಾವುದೇ ಚಿಂತನೆ ಮಾಡಿಲ್ಲ. ಮುಂದೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಆಚರಣೆ ಸರ್ಕಾರದ ಗಮನದಲ್ಲಿದೆ. ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement