ಕೊರೊನಾ ಸೋಂಕು ತಗುಲಿ 154 ದಿನಗಳ ಹೋರಾಟದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾದ ಕೊಪ್ಪಳದ ಮಹಿಳೆ

ಕೊಪ್ಪಳ: ಕೊರೊನಾ ಸೋಂಕಿಗೆ ತುತ್ತಾಗಿರುವ ಮಹಿಳೆಯೊಬ್ಬರು 158 ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿ ಇಂದು, ಮಂಗಳವಾರ ಕೊಪ್ಪಳದ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..!
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೋದೂರು ಗ್ರಾಮದ ಗೀತಾ (45) ಎಂಬವರು ಸೋಂಕಿತ ಮಹಿಳೆಯು ಒಟ್ಟು 108 ದಿನ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಳೆದ ಜುಲೈ 13 ರಂದು ಕೋವಿಡ್ ದೃಢಪಟ್ಟು ಆಸ್ಪತ್ರೆಗೆ ಗೀತಾ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದಾಗ ಶೇ.90ರಷ್ಟು ಶ್ವಾಸಕೋಶಕ್ಕೆ ಹಾನಿಯಾಗಿತ್ತು. 158 ದಿನಗಳ ಕಾಲ ಚಿಕಿತ್ಸೆ ಪಡೆದು ಪವಾಡವೆಂಬಂತೆ ಮಹಿಳೆ ಈಗ ಕೊರೊನಾ ಮುಕ್ತರಾಗಿದ್ದಾರೆ. ಸದ್ಯ ಸೋಂಕಿತ ಗೀತಾ ಸಂಪೂರ್ಣ ಗುಣಮುಖರಾಗಿದ್ದರೂ, ಕನಿಷ್ಠ ಆಕ್ಸಿಜನ್ ಬೆಂಬಲ ಬೇಕಾಗುತ್ತದೆ. ಸಾಕಷ್ಟು ಮುಂಜಾಗ್ರತೆ ಕ್ರಮಗಳ ಬಳಿಕ ವೈದ್ಯರು ಅವರನ್ನು ಬಿಡುಗಡೆ ಮಾಡಿದ್ದಾರೆ.

5 / 5. 1

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement