ನವದೆಹಲಿ: ಸೇನಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಹಾಗೂ ಅವರು ಪತ್ನಿ ಸೇರಿದಂತೆ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್ನಲ್ಲಿ ಬುಧವಾರ ಪತನವಾಗಿದ್ದು ಈ ದುರಂತಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.
ಬಿಪಿನ್ ರಾವತ್ ಸೇರಿದಂತೆ 14 ಪ್ರಯಾಣಿಕರು ಹೆಲಿಕಾಪ್ಟರ್ನಲ್ಲಿದ್ದರು.
ಗುಡ್ಡಗಾಡು ಪ್ರದೇಶ ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಕಟ್ಟೇರಿ-ನಂಚಪ್ಪಂಚತ್ರಂ ಪ್ರದೇಶದಲ್ಲಿ ಮಂಜು ಕವಿದ ವಾತಾವರಣದ ನಡುವೆ ಕಡಿಮೆ ಗೋಚರತೆಯಿಂದಾಗಿ ಇದು ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಬಿಪಿನ್ ರಾವ್ ಅವರು, ವೆಲ್ಲಿಂಗ್ಟನ್ನ ಸೇನಾ ಆಸ್ಪತ್ರೆಯಲ್ಲಿ ರಾವತ್ಗೆ ಅವರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.
ಇವರಲ್ಲದೆ ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಪ್ರಯಾಣ ಮಾಡುತ್ತಿದ್ದರು.ಅರುಣ್ ಸಿಂಗ್
ಮೃತಪಟ್ಟವರ ಗುರುತು ಪತ್ತೆಗಾಗಿ ವೈದ್ಯರು ಡಿಎನ್ಎ ಪರೀಕ್ಷೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಸೇನಾ ಸಿಬ್ಬಂದಿ ಅಪಘಾತದ ಸ್ಥಳವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಜನರು ಈ ಪ್ರದೇಶಕ್ಕೆ ಭೇಟಿ ನೀಡದಂತೆ ಕೇಳಿಕೊಳ್ಳಲಾಗಿದೆ. ರಾಜ್ಯ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಕೂನೂರಿನಿಂದ ಕೊಯಮತ್ತೂರಿನವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಇದಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಅಪಘಾತ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದರು. ಗುರುವಾರ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದ ಕುರಿತು ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಮಾಹಿತಿ ನೀಡಲಿದ್ದಾರೆ. ಟೇಕ್ ಆಫ್ ಆದ 33 ನಿಮಿಷಗಳ ನಂತರ ಹಾಗೂ ಅದು ಇಳಿಯಲಿರುವ ಪ್ರದೇಶ ತಲುಪುವ 10 ನಿಮಿಷಗಳ ಮೊದಲುಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿ ಅಪಘಾತಕ್ಕೆ ಈಡಾಗಿದೆ ಎನ್ನಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ