ಭಾರತದ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಪ್ರವಾಸ: ಭಾರತ ತಂಡ ಪ್ರಕಟಿಸಿದ ಬಿಸಿಸಿಐ

ನವದೆಹಲಿ: 2021ರ ಡಿಸೆಂಬರ್‌ 26ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್‌ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ.
ಡಿಸೆಂಬರ್ 26 ರಿಂದ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮೊದಲ ಟೆಸ್ಟ್ ನಡೆಯುತ್ತದೆ, ನಂತರ ಎರಡನೇ ಟೆಸ್ಟ್ ವಾಂಡರರ್ಸ್‌ನಲ್ಲಿ (ಜನವರಿ 3-7) ಮತ್ತು ಮೂರನೇ ಟೆಸ್ಟ್ ನ್ಯೂಲ್ಯಾಂಡ್ಸ್‌ನಲ್ಲಿ (ಜನವರಿ 11-15). ಏಕದಿನದ ಸರಣಿಯ ಮೊದಲ ಎರಡು ಪಂದ್ಯಗಳು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ಮತ್ತು ಮೂರನೇ ಪಂದ್ಯ ನ್ಯೂಲ್ಯಾಂಡ್ಸ್‌ನಲ್ಲಿ ನಡೆಯಲಿದೆ. ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮುಂದೂಡಲಾಗಿದೆ.
ಪ್ರಮುಖ ಆಟಗಾರರಾದ ರವೀಂದ್ರ ಜಡೇಜಾ, ಶುಭಮನ್ ಗಿಲ್, ಅಕ್ಷರ್ ಪಟೇಲ್ ಮತ್ತು ರಾಹುಲ್ ಚಾಹರ್ ಅವರು ತಮ್ಮ ಗಾಯಗಳಿಗೆ ಚಿಕಿತ್ಸೆ ಪಡೆಯತ್ತಿರುವ ಕಾರಣ ಪ್ರವಾಸಕ್ಕೆ ಲಭ್ಯವಿರುವುದಿಲ್ಲ. ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಇಲ್ಲದ ಹನುಮ ವಿಹಾರಿ ಮತ್ತು ಮೊಹಮ್ಮದ್ ಶಮಿ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (wk), ವೃದ್ಧಿಮಾನ್ ಸಹಾ (wk), ಆರ್ ಅಶ್ವಿನ್ , ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹದ್. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್.
ಸ್ಟ್ಯಾಂಡ್‌ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement