ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಲಿ: ಸುಬ್ರಮಣಿಯನ್ ಸ್ವಾಮಿ

ಉಡುಪಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಸಂಸದ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯ ತನಿಖೆಯಿಂದ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು. ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದರು.
ಈ ದುರ್ಘಟನೆಯಿಂದ ನನಗೆ ಶಾಕ್ ಆಗಿದೆ. ಘಟನೆ ನಡೆದಿರುವ ಬಗ್ಗೆ ಮಾಧ್ಯಮಗಳಿಂದ ತಿಳಿದಿದೆ. ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲ. ಆದರೆ ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ವಿಷಯ ಎಂದರು.
ರಾವತ್ ದಂಪತಿ ಸೇರಿ 14 ಮಂದಿ Mi-17V5 ಸೇನಾ ಹೆಲಿಕಾಪ್ಟರ್‌ನಲ್ಲಿ ತಮಿಳುನಾಡಿನ ವೆಲ್ಲಿಂಗ್ಟನ್‍ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಊಟಿ ಬಳಿಯ ಕೂನೂರಿನ ಸಮೀಪ ಬರುತ್ತಿದ್ದಂತೆ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಪತನಗೊಂಡಿದೆ. ಪರಿಣಾಮ 13 ಮಂದಿ ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement