ಧಾರವಾಡ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಎಸ್. ಆರ್.ಮೋರೆ ( 82 ವರ್ಷ) ಇಂದು ಗುರುವಾರ ನಿಧನರಾಗಿದ್ದಾರೆ.
ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು, ಗುರುವಾರ ನಿಧನರಾಗಿದ್ದಾರೆ. ಅವರು ತಮ್ಮ ಜನ್ಮದಂದೇ ಇಹಲೋಕ ತ್ಯಜಿಸಿದ್ದಾರೆ.
ನಾಲ್ಕು ಬಾರಿ ಧಾರವಾಡದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದ ಮೋರೆ ಅವರು ಕಾಂಗ್ರೆಸ್ನಲ್ಲಿ ಎಸ್.ಬಂಗಾರಪ್ಪ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು.
ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿದ್ದರು ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಖಾತೆ ಸಚಿವರಾಗಿ ಎಸ್ ಆರ್ ಮೋರೆ ಕಾರ್ಯನಿರ್ವಹಿಸಿದ್ದರು. ಇಂದು ಅವರು 82ನೇ ಜನ್ಮದಿನವಾಗಿತ್ತು. ಜನ್ಮದಿನದಂದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಎಸ್.ಆರ್.ಮೋರೆ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ