ಚೆನ್ನೈ: ಮಿಲಿಟರಿ ಹೆಲಿಕ್ಯಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.
ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ, ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ, ಬುಧವಾರ ತೀವ್ರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಶೌರ್ಯ ಚಕ್ರ ಪುರಸ್ಕೃತ ವಿಕ್ರಂ ಸಿಂಗ್ ಅವರ ಆರೋಗ್ಯದ ಎಲ್ಲ ಅಂಗಾಂಗಳು ಸ್ಥಿರವಾಗಿದೆ ಆದರೆ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ.
ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವರುಣ್ ಸಿಂಗ್ ಅವರ ಸ್ಥಿತಿಯ ಬಗ್ಗೆ ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಿದ್ದು, ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್ ಸಿಂಗ್ ಅವರು ಜೀವ ರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ,’ ಎಂದು ಅವರು ತಿಳಿಸಿದರು.
ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದರು.
ದುರಂತದಲ್ಲಿ ಮಡಿದವರಿಗೆ ರಾಜ್ಯಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.


ನಿಮ್ಮ ಕಾಮೆಂಟ್ ಬರೆಯಿರಿ