ಓಮಿಕ್ರಾನ್ ಸೋಂಕಿತರಿಗೆ ನಿರ್ದಿಷ್ಟ ಕೋವಿಡ್ ಚಿಕಿತ್ಸಾ ಸೌಕರ್ಯ ಇರುವಲ್ಲೇ ಚಿಕಿತ್ಸೆ ನೀಡಿ: ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನವದೆಹಲಿ: ದೇಶದ ಕೆಲವೆಡೆ ಕೊರೊನಾ ರೂಪಾಂತರಿ ತಳಿಯಾದ ಓಮಿಕ್ರಾನ್ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚನೆಯೊಂದನ್ನು ನೀಡಿದೆ.
ಓಮಿಕ್ರಾನ್ ಸೋಂಕಿತರನ್ನು ನಿರ್ದಿಷ್ಟ ಕೋವಿಡ್ ಚಿಕಿತ್ಸಾ ಸೌಕರ್ಯ ಇರುವ ಹಾಗೂ ಕ್ವಾರಂಟೈನ್ ಮಾಡಲು ವ್ಯವಸ್ಥೆ ಇರುವಲ್ಲಿಯೇ ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಓಮಿಕ್ರಾನ್ ವೇಗವಾಗಿ ಹರಡುವುದರಿಂದ ಚಿಕಿತ್ಸೆ ಸಂದರ್ಭದಲ್ಲಿ ಆರೋಗ್ಯ ಸಂಬಂಧಿ ಹಾಗೂ ಇತರೆ ರೋಗಿಗಳಿಗೆ ಓಮಿಕ್ರಾನ್ ಹರಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕಾಗಿಯೂ ಸೂಚಿಸಲಾಗಿದೆ.
ಓಮಿಕ್ರಾನ್ ಪತ್ತೆಯಾದವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಅವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನುಸಹ ಪತ್ತೆ ಮಾಡಿ ಆರಂಭದಲ್ಲಿಯೇ ಓಮಿಕ್ರಾನ್ ಹರಡುವುದನ್ನು ತಡೆಗಟ್ಟಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರವು ಪತ್ರ ಬರೆದು ಸೂಚನೆ ನೀಡಿದೆ.

0 / 5. 0

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement