ಸದ್ಯಕ್ಕೆ ನೈಟ್, ವೀಕೆಂಡ್ ಕರ್ಫ್ಯೂ ಸದ್ಯಕ್ಕಿಲ್ಲ : ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ವಾರದ ಬಳಿಕ ನಿರ್ಧಾರ- ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರ ಯಾವುದೇ ರೀತಿಯ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಜ್ಞರ ಜೊತೆಗೆ ಚರ್ಚೆ ನಡೆಸಿದ್ದೇವೆ. ಓಮಿಕ್ರಾನ್ ಬಗ್ಗೆ ವಿವರಣೆ ನೀಡಿದ್ದಾರೆ. ಈಗಿರುವ ಪ್ರಕರಣಗಳಿಂದ ಗಾಬರಿಯಾಗಬೇಕಿಲ್ಲ ಎಂದು ಹೇಳಿದ್ದಾರೆ. ಆದರೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ, ವೀಕೆಂಡ್‌ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ಈ ಬಗ್ಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇವೆ. ಕ್ರಿಸ್ಮಸ್, ಹೊಸ ವರ್ಷದ ಬಗ್ಗೆ ಒಂದು ವಾರ ನೋಡಿಕೊಂಡು ಆ ಮೇಲೆ ಪರಿಸ್ಥಿತಿ ಅವಲೋಕನ ಮಾಡಿ ನಿರ್ಧಾರ ಮಾಡಲಾಗುತ್ತದೆ ಎಂದರು.
ಗಡಿಭಾಗದಲ್ಲಿ ಈಗಿರುವ ಕಟ್ಟೆಚ್ಚರವನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅದರಲ್ಲಿಯೂ ಕೇರಳ ವಿದ್ಯಾರ್ಥಿಗಳಿಗೆ ಈಗಿರುವ ಮುಂಜಾಗ್ರತಾ ಕ್ರಮಗಳೆಲ್ಲ ಮುಂದುವರಿಯುತ್ತದೆ. ಅವರಿಗೆ ಎಲ್ಲ ರೀತಿಯ ಟೆಸ್ಟ್ ಗಳನ್ನು ಮಾಡಲಾಗುತ್ತದೆ. ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ. ಕ್ರಿಸ್ಮಸ್ ಮತ್ತೆ ಹೊಸ ವರ್ಷಕ್ಕೆ ೇನು ಮಾಡಬೇಕೆಂದು ಇನ್ನೂ ಒಂದು ವಾರ ಈ ಸೋಂಕಿನ ಬೆಳವಣೆಗೆ ನೋಡಿ ನಂತರ ಈ ಕುರಿತು ನಿರ್ಧರಿಸಲಾಗುತ್ತದೆ. ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ ಎಂದರು.
ಆದರೂ ಈ ಬಗ್ಗೆ ನಾವು ಯಾವುದೇ ನಿರ್ಲಕ್ಷ್ಯ ತೋರುವುದಿಲ್ಲ. ನಾವು ಈ ಕುರಿತು ಹೆಚ್ಚಿನ ಗಮನ ಕೊಟ್ಟು ಮುಂಜಾಗ್ರತೆಯ ಕ್ರಮ ಅನುಸರಿಸಲು ಒತ್ತು ನೀಡುತ್ತೇವೆ.
ಹಾಸ್ಟೆಲ್‌ ಗಳಿಗೆ ಮಾರ್ಗಸೂಚಿ ನೀಡಿದ್ದೇವೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ. ಅಲ್ಲಿನ ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಬೇಕು. ಮೂರು ಜನರಿಗೆ ಕೋವಿಡ್ ಪಾಸಿಟಿವ್ ಆದರೂ ಕ್ಲಸ್ಟರ್ ಮಾಡಲು ನಿರ್ಧಾರ ಮಾಡಿದ್ದೇವೆ ಎಂದರು.
ವ್ಯಾಕ್ಸಿನ್ ಡ್ರೈವ್ ಮಾಡಲು ನಿರ್ಧಾರ ಮಾಡಲಾಗಿದೆ. ಲಸಿಕೆ ಪಡೆಯದವರಿಗೆ ಲಸಿಕೆ ಹಾಕಿಸಲಾಗುವುದು. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರವಿದೆ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಮೂರು ಜನರಿಗೆ ಕೊರೊನಾ ಬಂದರೂ ಅಲ್ಲಿ ಕ್ಲಸ್ಟರ್ ಅನ್ನು ಘೋಷಿಸಲಾಗುತ್ತದೆ ಎಂದು ಸೂಚನೆ ನೀಡಲಾಗಿದೆ. ಈ ವೇಳೆ ನಮ್ಮ ಸಚಿವರು ಡ್ರ್ಯವ್ ಮೂಲಕ ವಾಕ್ಸಿನೇಷನ್ ಕೊಡಿಸಬೇಕು ಎಂದು ಸಲಹೆಯನ್ನು ನೀಡಿದ್ದಾರೆ. ಎಲ್ಲವನ್ನು ಸೇರಿಸಿ ವಾಕ್ಸಿನೇಷನ್ ಡ್ರೈವ್ ಅನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement