ಹುಬ್ಬಳ್ಳಿ: ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡ ಎಬಿವಿಪಿ, ಕಾನೂನು ವಿವಿಗೆ ಮುತ್ತಿಗೆ

ಹುಬ್ಬಳ್ಳಿ: ಕಾನೂನು ಪದವಿ ಆಫ್ ಲೈನ್ ಪರೀಕ್ಷೆ ರದ್ದತಿ ಹಾಗೂ ಕೂಡಲೇ ತರಗತಿ ಆರಂಭಕ್ಕೆ ಒತ್ತಾಯಿಸಿ, ಕಾನೂನು ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಿ, ಎಬಿವಿಪಿಯಿಂದ ಸಾವಿರಾರು ವಿದ್ಯಾರ್ಥಿಗಳು ಗುರುವಾರ ಕಾನೂನು ವಿಶ್ವ ವಿದ್ಯಾಲಯದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ವಿದ್ಯಾರ್ಥಿಗಳು ರಾಯಾಪುರದ ಮಹಂತ್ ಕಾಲೇಜಿನಿಂದ ನವನಗರದ ಕಾನೂನು ವಿವಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯದ ವಿವಿಧಡೆಯಿಂದ ಬಂದ ವಿದ್ಯಾರ್ಥಿಗಳು ನಂತರ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಉಪಕುಲಪತಿ ಈಶ್ವರ ಭಟ್ ಅವರಿಗೆ ಮನವಿ ಸಲ್ಲಿಸಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯದ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ವಿದ್ಯಾರ್ಥಿಗಳು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ವಿದ್ಯಾರ್ಥಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಟ್ಟರು.
ನಂತರ ಮನವಿ ಸ್ವೀಕರಿಸಿದ ಉಪಕುಲಪತಿಗಳು ಒಂದು ಗಂಟೆ ಸಮಯಾವಕಾಶ ಪಡೆದು ಎಲ್ಲ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಕಾನೂನ ಸಚಿವರೊಂದಿಗೆ ಚರ್ಚಿಸಿ ತಮ್ಮ ನಿಯಮಗಳನ್ನು ವಿದ್ಯಾರ್ಥಿಗಳ ಮುಂದಿಟ್ಟರು. ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಮತ್ತೆ ಹೋರಾಟ ಮುಂದುವರಿಸಿದರು. ಪ್ರತಿಭಟನೆ ತೀವ್ರಗೊಂಡಾಗ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಉಪಕುಲಪತಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಬೆಂಗಳೂರಿಗೆ ಹೋಗಿ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ರಾಜ್ಯ ಕಾರ್ಯದರ್ಶಿ ಪ್ರತೀಕ ಮಾಳಿ, ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ, ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ಶ್ರೀರಾಮ, ಸಚಿನ್‌ ಕುಳಗೇರಿ, ಐಶ್ವರ್ಯ ಶೆಟ್ಟಿ, ಗಂಗಾಧರ ಹಂಜಗಿ ಇದ್ದರು.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement