ಈಜಲು ಹೋಗಿದ್ದ ವಿದ್ಯಾರ್ಥಿ ಹೊಳೆಯಲ್ಲಿ ಮುಳುಗಿ ಸಾವು

ಶಿರಸಿ: ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆಯಲ್ಲಿ ಗುರುವಾರ ನಡೆದ ಬಗ್ಗೆ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಖನ್   (17) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಕೆಂಗ್ರೆ ಹೊಳೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಪೊಲೀಸರು, ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಸಂಜೆ ಶವ ಹೊರಕ್ಕೆ ತೆಗೆಯಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement