ಜನರಲ್‌ ಬಿಪಿನ್‌ ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಹಾವೇರಿ: ಸಿಡಿಎಸ್‌ ಜನರಲ್‌ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾವಣೆ ನಂತರ ಮಾತನಾಡಿದ ಅವರು, ಇಡೀ ದೇಶವೇ ರಾವತ್ ಅವರ ಸಾವಿಗೆ ಕಂಬನಿ‌‌ ಮಿಡಿದಿದೆ. ಆದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್‌ಗಳನ್ನು ಹಾಕಿರುವುದು ಖಂಡನೀಯ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು, ಈಗಾಗಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಿನ್ನೆ ಏರ್‌ಫೋರ್ಸ್ ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಗ್ರೂಪ್ ಕ್ಯಾಪ್ಟನ್ ವರುಣ ಪ್ರತಾಪ ಸಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅಲ್ಲಿ ಉತ್ತಮ ವೈದ್ಯರ ತಂಡವಿದೆ ಎಂದು ಮಾಹಿತಿ ನೀಡಿದ್ದಾರೆ.
ಲಸಿಕೆ ಅಭಿಯಾನ ಕುರಿತು ಮಾತನಾಡಿದ ಅವರು, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದ ಪರಿಣಿತರ ತಂಡ ನಿರ್ಧಾರಿಸುತ್ತದೆ. ಕೇರಳದಲ್ಲಿ ಹಕ್ಕಿ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಈಗಾಗಲೆ ಆ ಬಗ್ಗೆ ಸಭೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement