ನಾನು ಸಿಎಂ ಆಗುವ ಕುರಿತು ಎಲ್ಲಯೂ ಮಾತನಾಡಿಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ನಿರಾಣಿ

ಬಾಗಲಕೋಟೆ: ಮುಖ್ಯಮಂತ್ರಿ ಆಗುತ್ತೇನೆ ಎಂದು ನಾನು ಎಲ್ಲಿಯೂ ‌ಹೇಳಿಲ್ಲ ಎಂದು ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಇಂದು (ಶುಕ್ರವಾರ) ಬಾಗಲಕೋಟೆಜಿಲ್ಲೆಯ ‌ಬೀಳಗಿ ಪಟ್ಟಣ ಪಂಚಾಯತದಲ್ಲಿ ವಿಧಾನಪರಿಷತ್‌ಗೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದರು.
ಈಗ ನಮ್ಮ ಪಕ್ಷದ ನಾಯಕರು ನನಗೆ ಮಂತ್ರಿ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸರಿಯಾಗಿ ನಿಭಾಯಿಸುವ ಕೆಲಸ ಮಾಡುತ್ತಿದ್ದೇನೆ. ನನ್ನ ಬಗ್ಗೆ ಕೆಲವರು ಮಾತನಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ. ಸಮಸ್ತ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜನರಿಗೆ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement