ಬಜ್ಪೆ :ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ -ಆರೋಪಿ ಬಂಧನ

ಮಂಗಳೂರು: ಯುವತಿ ಪ್ರೀತಿ ನಿರಾಕಣೆ ಮಾಡಿದ್ದಕ್ಕಾಗಿ, ಆಕೆಯ ಪರಿಚಯಸ್ಥ ಯುವನೇ ಅತ್ಯಾಚಾರ ಮಾಡಿದ ಘಟನೆ ಬಜ್ಪೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪೊಲೀಸರು ಆರೋಪಿ ಅಬುಬಕರ್ ಸಿದ್ದಿಕ್ (21) ಎಂಬಾತನನ್ನು ಬಂಧಿಸಿದ್ದಾರೆ.
2019ರಲ್ಲಿ ಯುವತಿ ಹಾಗೂ ಅಬುಬಕರ್ ಸಿದ್ದಿಕ್ ಇಬ್ಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.
ಯುವತಿ ಡಿಸೆಂಬರ್‌ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹಿಂಬಾಲಿಸಿಕೊಂಡು ಬಂದು ಮನೆಯೊಳಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಳು‌. ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ಈಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement