ಬೆಳಗಾವಿ ಅಧಿವೇಶನದಲ್ಲಿ ಮತಾಂತರ ತಡೆ ಮಸೂದೆ ಮಂಡನೆಗೆ ಸಿದ್ಧತೆ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆಯಲು ರೂಪಿಸಿರುವ ಕಾಯ್ದೆ ಜಾರಿ ಸಂಬಂಧ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಮಸೂದೆಯ ಕರಡು ಸಿದ್ಧವಾಗಿದ್ದು, ಎರೆಡೆರೆಡು ಬಾರಿ ಕರಡನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿ ಬೆಳಗಾವಿ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ತಯಾರಿ ನಡೆಸಲಾಗಿದೆ ಎನ್ನಲಾಗಿದೆ.
ಈ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೆಲ ಕಠಿಣ ನಿಯಮಗಳನ್ನು ಅಳವಡಿಕೆ ಮಾಡಲಾಗಿದ್ದು, ಮತಾಂತರ ಮಾಡವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅಂಶ ಸಹ ವಿಧೇಯಕದಲ್ಲಿದೆ ಎಂದು ಹೇಳಲಾಗಿದೆ.
ಕರಡು ವಿಧೇಯಕದಲ್ಲಿ ಬಲವಂತದ ಮತಾಂತರವನ್ನು ಅಸಿಂಧು ಎಂದು ಘೋಷಿಸಲು ಅವಕಾಶವಿದ್ದು, ಮತಾಂತರ ಸಿಂಧುವಾಗಲು ಮ್ಯಾಜಿಸ್ಟ್ರೇಟ್‌ಗೆ ಮುಂದೆಯೇ ಮತಾಂತರ ಉದ್ದೇಶ ತಿಳಿಸಬೇಕು. ಮ್ಯಾಜಿಸ್ಟ್ರೇಟ್ ಮತಾಂತರದ ವಾಸ್ತವ ಉದ್ದೇಶವನ್ನರಿಯಲು ಪೊಲೀಸ್ ತನಿಖೆ ನಡೆಸಲು ಅವಕಾಶ ನೀಡುವ ಅಂಶವೂ ವಿಧೇಯಕದಲ್ಲಿದೆ ಎಂದು ಎನ್ನಲಾಗಿದೆ.
ರಾಜ್ಯ ಮಂಡಿಸಲಿರುವ ಮತಾಂತರ ನಿಷೇಧ ವಿಧೇಯಕ ಕೆಲ ಕಠಿಣ ನಿಯಮಗಳನ್ನು ಹೊಂದಿರಲಿದೆ ಎಂದು ಮೂಲಗಳು ತಿಳಿಸಿವೆ. ವಿಧೇಯಕದಲ್ಲಿ ಬಲವಂತದ ಮತಾಂತರವನ್ನು ಅಸಿಂಧು ಎಂದು ಘೋಷಿಸಲಾಗುವುದು. ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಮತಾಂತರ ಮಾಡುವವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಅಂಶವನ್ನು ಸೇರಿಸಲಾಗಿದೆ ಎಂದು ತಿಳಿದುಬಂದಿದೆ.
ಜೊತೆಗೆ ಮತಾಂತರ ಸಿಂಧುವಾಗಲು ಮ್ಯಾಜಿಸ್ಟ್ರೇಟ್‍ಗೆ ನಿಗದಿತ ಕಾಲಾವಧಿಯ ಮುಂಚೆಯೇ ಮತಾಂತರದ ಉದ್ದೇಶವನ್ನು ಘೋಷಿಸಬೇಕಾದ ಅಂಶವನ್ನೂ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಮ್ಯಾಜಿಸ್ಟ್ರೇಟ್ ಮತಾಂತರದ ವಾಸ್ತವ ಉದ್ದೇಶವನ್ನೂ ಅರಿಯಲು ಪೊಲೀಸ್ ತನಿಖೆ ನಡೆಸುವ ಅಂಶವೂ ವಿಧೇಯಕದಲ್ಲಿ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಲವಂತದ ಮತಾಂತರ ಆಗಿಲ್ಲ ಎಂಬ ಅಂಶವನ್ನು ಸಾಬೀತುಪಡಿಸಬೇಕಾದ ಅಂಶಗಳನ್ನೂ ಈ ವಿಧೇಯಕದಲ್ಲಿ ಸೇರಿಸಲಾಗಿದೆ. ಹಾಗೆಯೇ ಬಲವಂತದ ಮತಾಂತರ ಮಾಡಿದವರಿಗೆ ೧ ರಿಂದ ೫ ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶವೂ ಈ ಕಾಯ್ದೆಯಲ್ಲಿದೆ ಎಂದು ವರದಿ ತಿಳಿಸಿದೆ.
ಮತಾಂತರ ಮಸೂದೆ ಕಾಯ್ದೆ ಜಾರಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ, ವಿವಿಧ ಮಠಾಧೀಶರು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ಪಟ್ಟು ಹಿಡಿದಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ತುಳಸಿ ಮುನಿರಾಜುಗೌಡ ಅವರು ಮತಾಂತರ ನಿಷೇಧದ ಖಾಸಗಿ ವಿಧೇಯಕವನ್ನು ಮಂಡಿಸಲು ಸಭಾಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement