ಲ್ಯಾಂಡಿಂಗ್ ಸಮಸ್ಯೆ ಎದುರಿಸಿದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆಯಾಗಿದೆ.
ಈ ವಿಮಾನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಯಾಣಿಸುತ್ತಿದ್ದರು. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು.
ಹವಂಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್‌ಗೆ ಕೂಡಲೇ ಕ್ಲಿಯರೆನ್ಸ್ ಸಿಕ್ಕಿಲ್ಲ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಸಮಸ್ಯೆಯಾಗಿ ವಿಮಾನ 15 ನಿಮಿಷಗಳ ಕಾಲ ಆಕಾಶದಲ್ಲೇ ಹಾರುವ ಪರಿಸ್ಥಿತಿ ಒದಗಿತು. ಇಂಡಿಗೋ ವಿಮಾನ ಆಕಾಶದಲ್ಲೇ 3 ಸುತ್ತು ಸುತ್ತು ಹಾಕಿದೆ. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 7:30ಕ್ಕೆ ಲ್ಯಾಡಿಂಗ್ ಆಗಬೇಕಿದ್ದ ಅರ್ಧ ಗಂಟೆ ತಡವಾಗಿ ಲ್ಯಾಂಡಿಂಗ್ ಆಯಿತು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ವಿಮಾನ ತಡವಾಯಿತು ಎಂದು ತಿಳಿಸಿದರು. ಇವತ್ತು ಪರಿಷತ್ ಚುನಾವಣೆ ಇರುವುದರಿಂದ ಮ ಇಂದು ಶಿಗ್ಗಾಂವನಲ್ಲಿ ಮತಚಲಾವಣೆ ಮಾಡಲು ಆಗಮಿಸಿದ್ದೇನೆ. ಆದರೆ ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ ಎಂದು ತಿಳಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಆ್ಯಪ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement