ಬೆಂಗಳೂರು: ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ರಾಜ್ಯದಲ್ಲಿ ಈವರೆಗೆ 8 ಕೋಟಿ ಡೋಸ್ ಲಸಿಕೆ ನೀಡಿದೆ.
ಈ ಬಗ್ಗೆ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದು,ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ. ಡೋಸ್ ಲಸಿಕೆ ನೀಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಇದೆ. ಇದಕ್ಕಾಗಿ ಜಿಲ್ಲಾಡಳಿತಗಳು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಧನ್ಯವಾದ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 11) ಹೊಸದಾಗಿ 320 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,54,513 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 7,306 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 190 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ ಹಾಗೂ ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 5,547 ಸಕ್ರಿಯ ಪ್ರಕರಣಗಳಿವೆ.


ನಿಮ್ಮ ಕಾಮೆಂಟ್ ಬರೆಯಿರಿ