ಜನರಲ್‌ ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಬರಹ: ಪ್ರಕರಣ ದಾಖಲು

ಮಂಗಳೂರು: ಫೇಸ್ ಬುಕ್ ನಲ್ಲಿ ಹೆಲಿಕಾಪ್ಟಾರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನ, ಪ್ರಚೊದನಾಕಾರಿ ಬರಹ ಪ್ರಕಟಿಸಿದ ಇಬ್ಬರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮಿಳುನಾಡಿನ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುವ ಮೂಲಕ ಸಂಭ್ರಮಿಸಿರುವ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದವರ ವಿರುದ್ಧವೂ ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ತಮಿಳುನಾಡಿನ ಕುನೂರ್ ಬಳಿ ಬುಧವಾರ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿಜನರಲ್ ಬಿಪಿನ್ ರಾವತ್, ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದನ್ನು ವಿಚಾರವನ್ನು ಕೆಲವರು ಅಪಹಾಸ್ಯ ಮಾಡಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು.
ಈ ಕುರಿತು ಮಾತನಾಡಿದ ಅವರು, ಈ ರೀತಿಯ ಕಾಮೆಂಟ್‌‌ಗಳನ್ನು ಮೂರು ಖಾತೆಗಳಲ್ಲಿ ಹಾಕಿರುವುದು ತಿಳಿದು ಬಂದಿದ್ದು, ಇದು ನಕಲಿ ಖಾತೆ ಹಾಗೂ ಯಾಕೆ ಮತ್ತು ಯಾರು ಈ ರೀತಿಯ ಕಾಮೆಂಟ್‌‌ಗಳನ್ನು ಹಾಕಿದ್ದಾರೆ ಎಂಬುದನ್ನು ನಾವು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಂಬರ್ 8ರಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ ದುರಂತದಲ್ಲಿ ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌‌, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement