ಪ್ರಿಯಾಂಕಾ ಗಾಂಧಿ ಭೇಟಿ ಸಮಯದಲ್ಲಿ ಗೋವಾ ಕಾಂಗ್ರೆಸ್‌ ನಾಯಕರ ರಾಜೀನಾಮೆ ಸ್ವಾಗತ..!

ಪಣಜಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ (ಡಿಸೆಂಬರ್ 10) ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಲು ಗೋವಾಕ್ಕೆ ಬಂದಿಳಿದ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು.
ಪ್ರಿಯಾಂಕಾ ಗಾಂಧಿ ವಾದ್ರಾ ಗೋವಾದ ಮೊರ್ಪಿರ್ಲಾ ಗ್ರಾಮದಲ್ಲಿ ಯುವಕರು ಮತ್ತು ಬುಡಕಟ್ಟು ಮಹಿಳೆಯರೊಂದಿಗೆ ಸಂವಾದ ನಡೆಸಿದರು.
ಕಾಂಗ್ರೆಸ್‌ಗೆ ಸೇರಲು ಮತ್ತು ಮತ ಚಲಾಯಿಸುವಂತೆ ಪ್ರಿಯಾಂಕಾ ಗಾಂಧಿ ವಾದ್ರಾ ಜನರಿಗೆ ಮನವಿ ಮಾಡುತ್ತಿದ್ದರೆ, 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಮಾನ ಮನಸ್ಕ ಶಕ್ತಿಗಳೊಂದಿಗೆ ಪಕ್ಷದ ಉದ್ದೇಶಿತ ಮೈತ್ರಿಯ ಬಗ್ಗೆ ಗೋವಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ.
ಸ್ವತಂತ್ರ ಶಾಸಕ ರೋಹನ್ ಖೌಂಟೆ ಅವರ ಬೆಂಬಲದೊಂದಿಗೆ ಪೊರ್ವೊರಿಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ಗುಂಪು ಪಕ್ಷಕ್ಕೆ ರಾಜೀನಾಮೆ ನೀಡಿದೆ. ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಾಯಕತ್ವದ ಗಂಭೀರತೆಯ ಕೊರತೆಯಿದೆ ಎಂದು ನಾಯಕರು ಹೇಳಿದ್ದಾರೆ.
ಮುಂಬರುವ ಗೋವಾ ಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಗಂಭೀರತೆ ತೋರಿಸಿಲ್ಲ ಎಂದು ಪೊರ್ವೊರಿಮ್ ಗುಂಪಿನ ನಾಯಕ ಮಾಜಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಗುಪೇಶ್ ನಾಯ್ಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೆಲ ನಾಯಕರ ಧೋರಣೆಯಿಂದ ಕಾಂಗ್ರೆಸ್ ನಾನ್ ಸ್ಟಾರ್ಟರ್ ಆಗಿದೆ ಎಂದು ಆರೋಪಿಸಿದರು.
ದಕ್ಷಿಣ ಗೋವಾದ ಕರ್ಟೋರಿಮ್‌ನ ಹಿರಿಯ ಕಾಂಗ್ರೆಸ್ ನಾಯಕ ಮೊರೆನೊ ರೆಬೆಲೊ ಕೂಡ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ರೆಬೆಲೊ ಅವರು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರಾಗಿ ಬಡ್ತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.ಕಳೆದ ನಾಲ್ಕೂವರೆ ವರ್ಷಗಳಿಂದ ರೆಜಿನಾಲ್ಡೊ ಯಾವುದೇ ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ ಎಂದು ರೆಬೆಲೊ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement