ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕೊಲೆ, ಅಪಹರಣ ಸೇರಿದಂತೆ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಬಂಧನಕ್ಕೆ ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಆತನ ಕಾಲಿಗೆ ಗುಂಡುಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನೇಕ ಪ್ರಕರಣಗಳಲ್ಲಿ ಬೇಕಾಗಿದ್ದ ತಲೆ ಮರೆಸಿಕೊಂಡಿದ್ದ ಲೋಹಿತ್ ಪತ್ತೆಗೆ ಹಲಸೂರು ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಇಂದು ಆರೋಪಿ ಜೀವನ್ ಭೀಮಾನಗರ ಕಡೆಗೆ ಬರುವ ಮಾಹಿತಿ ಸಿಕ್ಕಿತ್ತು. ಬೆಳಗ್ಗೆ ಪೊಲೀಸರು ಆತನ ಬೆನ್ನತ್ತಿ ಬಂಧಿಸಲು ಹೋಗಿದ್ದ ವೇಳೆ ಹೆಡ್‌ಕಾನ್ಸ್‌ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಆಗ ಆರೋಪಿ ಕಾಲಿಗೆ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಆರೋಪಿ ಬಳಿ ಒಂದು ಇನ್ನೋವಾ ಕಾರು ಸಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಲೋಹಿತ್ ಆಂಧ್ರಪ್ರದೇಶದಲ್ಲಿ ಬಾಡಿಗೆಗೆ ಕಾರು ಪಡೆದು ಚಾಲಕನ ಮೇಲೆ ಹಲ್ಲೆ ನಡೆಸಿ ಕಾರು ಕಳ್ಳತನ ಮಾಡಿ ಅದೇ ಕಾರಿನಲ್ಲಿ ಆರೋಪಿ ಓಡಾಡುತ್ತಿದ್ದ. ಇಂದು ಬೆಳಗ್ಗೆ ಆತನ ಸ್ಥಳದ ಬಗ್ಗೆ ಪತ್ತೆಯಾಗಿದ್ದರಿಂದ ಪೊಲೀಸರು ಬಂಧಿಸಲು ಮುಂದಾಗಿದ್ದರು. ಲೋಹಿತ್ ಆಟೋ ಚಾಲಕ ವಿಜಯ್ ಕುಮಾರ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಲೋಹಿತ್ ತಲೆಮರೆಸಿಕೊಂಡಿದ್ದ. ಆರೋಪಿಯ ವಿರುದ್ಧ ಕೋಲಾರ, ಬೆಂಗಳೂರು ವ್ಯಾಪ್ತಿಯಲ್ಲಿ 17 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕಾಲಿಗೆ ಗುಂಡೇಟು ತಗುಲಿದ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement