ವಾಯುಸೇನೆ ಹೆಲಿಕಾಪ್ಟರ್‌ ದುರಂತ: ಆರು ಮೃತದೇಹದ ಗುರುತು ಪತ್ತೆ, ನಾಲ್ವರ ಗುರುತು ಪತ್ತೆಗೆ ಕಾಯುತ್ತಿದೆ ಕುಟುಂಬ

ನವದೆಹಲಿ: ವಾಯುಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿ 13 ಮಂದಿ ಸೇನಾಧಿಕಾರಿಗಳು ನಿಧನರಾಗಿದ್ದಾರೆ. ಮಡಿದವರ ಪೈಕಿ ಇಂದು ಮತ್ತೆ 6 ಮೃತದೇಹದ ಗುರುತು ಪತ್ತೆಯಾಗಿದೆ. ಆದರೆ ಇನ್ನೂ ನಾಲ್ವರ ಗುರುತು ಪತ್ತೆಯಾಗಬೇಕಿದ್ದು, ಕುಟುಂಬದವರು ಕಾಯುತ್ತಿದ್ದಾರೆ.
ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡ್ಡರ್ ಹಾಗೂ ಲಫ್ಟಿನೆಂಟ್ ಕರ್ನಲ್ ಸಿಂಗ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಡೆದಿದೆ. ಆದರೆ ಇನ್ನುಳಿದವರ ಗುರುತು ಪತ್ತೆಯಾಗದ ಕಾರಣ ಡಿಎನಎ ಪರೀಕ್ಷೆ ನಡೆಸಲಾಗಿತ್ತು. ಈಗ ಮತ್ತೆ 6 ಮೃತದೇಹದ ಗುರತು ಪತ್ತೆಯಾಗಿದೆ. ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚವ್ಹಾಣ್, ಸ್ಕ್ವಾರ್ಡ್ರನ್ ಲೀಡರ್ ಕುಲ್ದೀಪ್ ಸಿಂಗ್, ಜ್ಯೂನಿಯರ್ ವಾರಂಟ್ ಆಫೀಸರ್ ರಾಣಾ ಪ್ರತಾಪ್ ದಾಸ್, ಜ್ಯೂನಿಯರ್ ವಾರಂಟ್ ಆಫೀಸರ್ ಅಕ್ಕಾಲ್ ಪ್ರದೀಪ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಹಾಗೂ ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ್ ಅವರ ಗುರುತು ಪತ್ತೆಯಾಗಿದೆ.
ಗುರುತು ಪತ್ತೆಯಾದ 6 ಯೋಧರ ಪಾರ್ಥೀವ ಶರೀರವನ್ನು ವಿಶೇಷ ವಿಮಾನದಲ್ಲಿ ಅವರವರವ ಸ್ವಗ್ರಾಮಕ್ಕೆ ಕಳುಹಿಸಲಾಗಿದೆ. ಯೋಧರ ಅಂತ್ಯಕ್ರಿಯೆ ಸಕಲ ಮಿಲಿಟರಿ ಗೌರವದೊಂದಿಗೆ ನಡೆಸಲಾಗುತ್ತದೆ. ಇನ್ನೂ ನಾಲ್ಕು ಕುಟುಂಬಗಳು ಪಾರ್ಥೀವ ಶರೀರಕ್ಕಾಗಿ ಕಾಯುತ್ತಿದೆ. ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಹವಿಲ್ದಾರ್ ಸತ್ಪಾಲ್ ರೈ, ನಾಯಕ್ ಗುರಸೇವಕ್ ಹಾಗೂ ನಾಯಕ್ ಜಿತೇಂದ್ರ ಕುಮಾರ್ ಪಾರ್ಥೀವ ಶರೀರಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಗುರುತ ಪತ್ತೆಯಾಗದ ನಾಲ್ವರು ಯೋಧರು ಬಿಪಿನ್ ರಾವತ್ ಸ್ಟಾಫ್ ಆಫೀಸರ್ ಆಗಿದ್ದರು.
ಪೈಲೆಟ್, ಕೂ ಪೈಲೆಟ್, ಸ್ಟಾಫ್ ಸೇರಿದಂತೆ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದ ವಾಯುಸೇನೆಯ Mi-17V5 ಹೆಲಿಕಾಪ್ಟರ್ ತಮಿಳುನಾಡಿನ ಕೂನುರು ಬಳಿಯ ನೀಲಗಿರಿ ಕಾಡಿನಲ್ಲಿ ಅಪಘಾತಕ್ಕೆ ಗುರಿಯಾಗಿತ್ತು. ಈ ಅಫಘಾತದಲ್ಲಿ 13 ಮಂದಿ ಮೃತಪಟ್ಟಿದ್ದರೆ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ವವರುಣ್ ಸಿಂಗ್ ಆರೋಗ್ಯ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ ಎಂದ ವಾಯುಸೇನಾ ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement