15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ

posted in: ರಾಜ್ಯ | 1

ಬೆಂಗಳೂರು: ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಸಿಹಿಸುದ್ದಿ ನೀಡಿದ್ದಾರೆ.
15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಸಚಿವ ನಾಗೇಶ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ ಅವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 10 ಸಾವಿರ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಇದಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಹ ಸಚಿವರು ಮಾಹಿತಿ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

  1. Neelappa madikeshwar

    ಪ್ರಾಥಮಿಕ ದೈಹಿಕ ಶಿಕ್ಷಕರ ನೇಮಕಾತಿ ಮಾಡಿ ಇಲ್ಲ ಅಂದ್ರೆ ಡಿ. ಪಿ ಇ ಡಿ ಕಾಲೇಜು ಬಂದ ಮಾಡಿ

ನಿಮ್ಮ ಕಾಮೆಂಟ್ ಬರೆಯಿರಿ