ಕೊಡಗಿನಲ್ಲಿ 34 ವಿದ್ಯಾರ್ಥಿಗಳು ಸೇರಿ 49 ಜನರಿಗೆ ಕೊರೊನಾ ಸೋಂಕು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇಂದು ಒಂದೇ ದಿನ 34 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಶಾಲೆಯ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ.
ಶಾಲೆಯಲ್ಲಿರುವ ಒಟ್ಟು 210 ವಿದ್ಯಾರ್ಥಿಗಳ ಪೈಕಿ 75 ವಿದ್ಯಾರ್ಥಿಗಳಿಗೆ ಅರೋಗ್ಯ ಇಲಾಖೆಯಿಂದ ಕೋವಿಡ್ ಟೆಸ್ಟ್ ವರದಿ ಬಂದಿದ್ದು, ಇವರಲ್ಲಿ ೩೩. ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ. ಇನ್ನೂ 135 ವಿದ್ಯಾರ್ಥಿಗಳ ವರದಿ ಬಾಕಿಯಿದ್ದು, ವರದಿಗಾಗಿ ಅರೋಗ್ಯ ಇಲಾಖೆ ಕಾಯುತ್ತಿದೆ. ಕೊಡಗು ವಿದ್ಯಾಲಯದ 9 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಕಳೆದ ವಾರ ಈ ಶಾಲೆಯ 11 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಅರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement