ಇಂದಿನಿಂದ ಡಿ.15ರ ವರೆಗೆ ಕರ್ನಾಟಕದಲ್ಲಿ ಹಗುರ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರ ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒಳಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಬಂಗಾಳಕೊಲ್ಲಿಯಿಂದ ಈಶಾನ್ಯ ಮಾರುತಗಳು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಬೀಸುವ ಸಾಧ್ಯತೆಯಿದೆ. ಸೋಮವಾರ ತಮಿಳುನಾಡಿನಲ್ಲಿ ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ 3 ದಿನಗಳಲ್ಲಿ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಚದುರಿದ ಲಘು ಅಥವಾ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement