ಚಂಡೀಗಡ, ಆಂಧ್ರದಲ್ಲೂ ತಲಾ ಒಂದು ಓಮಿಕ್ರಾನ್ ಸೋಂಕು ದೃಢ : ದೇಶದಲ್ಲಿ 36ಕ್ಕೇರಿದ ಒಟ್ಟು ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಪ್ರಕರಣ ಆಂಧ್ರಪ್ರದೇಶ ಮತ್ತು ಚಂಡೀಗಢ ರಾಜ್ಯಗಳಲ್ಲಿ ಮೊದಲ ಬಾರಿಗೆ ವರದಿಯಾಗಿದೆ.
ನವೆಂಬರ್ 22ರಲ್ಲಿ ಇಟಲಿಯಿಂದ ಚಂಡೀಗಢದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾಗಿದೆ. ವ್ಯಕ್ತಿಯನ್ನು ಮೊದಲು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿತ್ತು. ಕ್ವಾರಂಟೈನ್‍ಲಿದ್ದ ಸೋಂಕಿತನ ಮಾದರಿಯನ್ನು ಡಿ.1ರಂದು ಜಿನೋಮ್ ಸೀಕ್ವೆನ್ಸಿಂಗ್ ಕಳುಹಿಸಿದಾಗ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
ಸೋಂಕಿತನಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಈ ವ್ಯಕ್ತಿ ಇಟಲಿಯಲ್ಲಿ ಫೈಜರ್ ಲಸಿಕೆಯ ಎರಡೂ ಡೋಸ್‍ಗಳನ್ನು ಪಡೆದುಕೊಂಡಿದ್ದಾನೆ. ಸದ್ಯ ಸೋಂಕಿತ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾನೆ. ಆರಂಭದಲ್ಲಿ ಕ್ವಾರಂಟೈನ್‍ನಲ್ಲಿದ್ದಾಗ ಕುಟುಂಬದ 7 ಮಂದಿ ಈತನ ಸಂಪರ್ಕದಲ್ಲಿದ್ದರು. ಎಲ್ಲರ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಇಂದು ಮತ್ತೆ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ಆಂಧ್ರಪ್ರದೇಶವು ಐರ್ಲೆಂಡ್‌ನ 34 ವರ್ಷದ ಪ್ರಯಾಣಿಕನಲ್ಲಿ ಹೊಸ ರೂಪಾಂತರದ ಮೊದಲ ಪ್ರಕರಣವನ್ನು ವರದಿ ಮಾಡಿದೆ. ಇಲ್ಲಿಯವರೆಗೆ, ರಾಜ್ಯಕ್ಕೆ ಬಂದ 15 ವಿದೇಶಿ ಪ್ರಯಾಣಿಕರಿಗೆ ಕೋವಿಡ್ -19 ಪಾಸಿಟಿವ್ ಕಂಡುಬಂದಿದೆ ಮತ್ತು ಎಲ್ಲಾ ಮಾದರಿಗಳನ್ನು ಜಿನೋಮ್ ಅನುಕ್ರಮಕ್ಕಾಗಿ ಸಿಸಿಎಂಬಿಗೆ ಕಳುಹಿಸಲಾಗಿದೆ. 15 ರಲ್ಲಿ, 10 ಪ್ರಕರಣಗಳಿಗೆ ಸಂಬಂಧಿಸಿದ ಜೀನೋಮ್ ಸೀಕ್ವೆನ್ಸಿಂಗ್ ವರದಿಗಳನ್ನು ಸ್ವೀಕರಿಸಲಾಗಿದೆ ಮತ್ತು ಅವುಗಳಲ್ಲಿ ಒಂದು ಮಾತ್ರ ಓಮಿಕ್ರಾನ್ ಪಾಸಿಟಿವ್ ಎಂದು ದೃಢಪಡಿಸಲಾಗಿದೆ ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   'ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ...ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ' : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ಕರ್ನಾಟಕದಲ್ಲಿಯೂ ದಕ್ಷಿಣ ಆಫ್ರಿಕಾದಿಂದ ವಾಪಸ್ಸಾದ ವ್ಯಕ್ತಿಯಲ್ಲಿ ಓಮಿಕ್ರಾನ್‌ ಸೋಂಕು ದೃಢಪಟ್ಟಿದೆ.
ಈಗಾಗಲೇ ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 7 ಓಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ವಿಶ್ವದಲ್ಲಿ ಸುಮಾರು 59 ದೇಶಗಳು ಓಮಿಕ್ರಾನ್ ಪೀಡಿತವಾಗಿವೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement