ಬೆಳಗಾವಿಯಲ್ಲಿ ಎಂಇಎಸ್ ನಾಯಕರ ಮುಖಕ್ಕೆ ಮಸಿ, ನಾಳೆ ಬೆಳಗಾವಿ ಬಂದ್‌ಗೆ ಕರೆ

ಬೆಳಗಾವಿ: ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ.
ಕರ್ನಾಟಕ ಸರಕಾರ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿದೆ. ಆದರೆ ಇದಕ್ಕೆ ಪರ್ಯಾಯವಾಗಿ ಎಂಇಎಸ್ ಮಹಾಮೇಳಾವ್ ನಡೆಸಲು ಎಂಇಎಸ್ ಮಹಾಮೇಳಾವಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ ನಿನ್ನೆ ತಡರಾತ್ರಿಯಲ್ಲಿ ಕಾರ್ಯಕರ್ತರು ವೇದಿಕೆ ನಿರ್ಮಿಸಿದ್ದರು. ಇಂದು ಪೊಲೀಸರು ಇದನ್ನು ತೆರವುಗೊಳಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಎಂಇಎಸ್ ನಾಯಕ ದೀಪಕ್ ದಳವಿ ಅವರ ಮುಖಕ್ಕೆ ಬಸಿ ಬಳಿದಿದ್ದಾರೆ. ನಂತರ ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಇದೇವೇಳೆ ಘಟನೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿಗೆ ಯತ್ನಿಸಿದರು. ಇದೇ ವೇಳೆ ಪೊಲೀಸರು ಹಾಗೂ ಎಂಇಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು ನಂತರ ಪೋಲಿಸರು ಮಸಿ ಬಳಿದ ಕನ್ನಡ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
ಈ ನಡುವೆ ಎಂಇಎಸ್ ಕಾರ್ಯಕರ್ತರು ನಾಳೆ ಬೆಳಗಾವಿ ಬಂದ್ ಗೆ ಕರೆ ನೀಡಿದ್ದಾರೆ. ಬೆಳಗಾವಿ ಬಂದ್ ಗೆ ಕರೆ ನೀಡಿರುವುದು ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement