ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆ ಹಿನ್ನೆಲೆಯಲ್ಲಿಯೇ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಕ್ರೈಸ್ತ ಸಮುದಾಯದ ನಾಯಕರಿಗೆ ನಾನು ಹೇಳಿದ್ದೇನೆ. ಯಾರಿಗೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾನೂನು ಮಂಡನೆ ಮಾಡುತ್ತೇವೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ ಎಂದರು ತಿಳಿಸಿದ್ದಾರೆ.
ಒಟ್ಟು ಹತ್ತು ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನದ ಭದ್ರತೆಗಾಗಿ ಸುಮಾರು 4 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಧಿವೇಶನಕ್ಕಾಗಿ ಆಗಮಿಸುವವರಿಗಾಗಿ ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ