ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ

ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬೆಳಗಾವಿ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು, ಸೋಮವಾರ ಬೆಳಿಗ್ಗೆ ಸಭೆ ನಡೆಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಸುಲಲಿತವಾಗಿ ನಡೆಯುವಂತಾಗಲು ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ ಸಚಿವರು ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ ರಜನೀಶ್ ಗೋಯಲ್, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಪ್ರತಾಪ್ ರೆಡ್ಡಿ, ಐಜಿ ಬೆಳಗಾವಿ ವೃತ್ತ ಸತೀಶ್ ಕುಮಾರ್ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜ್ ಉಪಸ್ಥಿತರಿದ್ದರು.

0 / 5. 0

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement