ಲಾಕ್ಡೌನ್‌ನಲ್ಲಿ ಉದ್ಯೋಗ ಕಳೆದುಕೊಂಡು ಆರ್ಥಿಕ ಒತ್ತಡದಿಂದ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ

ಹೈದರಾಬಾದ್: ಆರ್ಥಿಕ ಸಮಸ್ಯೆಯಿಂದಾಗಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಬೀಗಿದುಕೊಂಡು ಮೃತಪಟ್ಟ ಮನಕಲಕುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಸ್ವಾತಿ ಕುಸುಮಾ (32) ಎಂಬವಳೇ ಮೃತ ಮಹಿಳೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸ್ವಾತಿ ಕುಸುಮಾ ಹಾಗೂ ಅವರ ಪತಿ ಸಾಯಿಕುಮಾರ್ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡಿದ್ದರು. ಇದರಿಂದಾಗಿ ಹಣದ ಸಮಸ್ಯೆ ಉಂಟಾಗಿತ್ತು.
ಆಕೆಯ ಪತಿ ಆರ್ಥಿಕ ಸಮಸ್ಯೆಯಿಂದಾಗಿ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಆದರೂ ತನ್ನ ಪತಿ ಕುಟುಂಬವನ್ನು ಪೋಷಿಸಲು ಸಾಕಾಗುವಷ್ಟು ದುಡಿಯುತ್ತಿಲ್ಲ ಎಂದು ಮಹಿಳಾ ಟೆಕ್ಕಿ ಮನನೊಂದಿದ್ದರು.
ಮಲಗುವ ಕೋಣೆಯ ಗೋಡೆಯ ಮೇಲೆ ಬರೆದಿರುವ ಡೆತ್‌ ನೋಟ್‌ಪ್ರಕಾರ, ಮಹಿಳೆ ತನ್ನ ಪತಿಯಿಂದ ಕಿರುಕುಳಕ್ಕೊಳಗಾಗಿದ್ದಾಳೆ ಮತ್ತು ಪತಿ ಮಕ್ಕಳ ಯೋಗಕ್ಷೇಮಕ್ಕೆ ಸಾಕಷ್ಟು ಜವಾಬ್ದಾರಿಯನ್ನು ವಹಿಸುತ್ತಿಲ್ಲ ಎಂದು ಹೇಳಿದ್ದಾಳೆ.
ಪತ್ನಿಯೊಂದಿಗೆ ಜಗಳವಾಡಿದ ಸಾಯಿಕುಮಾರ್ ಶುಕ್ರವಾರ ರಾತ್ರಿ ಮನೆಯಿಂದ ಹೊರಟು ಶನಿವಾರ ಸಂಜೆ ಮನೆಗೆ ಮರಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾಗಿರುವ ವರದಿ ತಿಳಿಸಿದೆ.
ಸ್ವಾತಿ ಅವರಿಗೆ ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ದಂಪತಿ ಆಗಾಗೆ ಜಗಳವಾಡುತ್ತಿದ್ದರು. ಈ ಜಗಳ ಅತಿಯಾಗಿ ಸಾಯಿಕುಮಾರ್ ಮನೆ ಬಿಟ್ಟು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಿ ಮಲಗುವ ಕೋಣೆಯ ಗೋಡೆಯ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ವಾತಿ ಕುಸುಮಾ ಅವರ ಪತಿ ಸಾಯಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ "ತಪ್ಪು" ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement