ಉತ್ತರ ಕನ್ನಡದಲ್ಲಿ ಉಳ್ವೇಕರ, ಶಿವಮೊಗ್ಗದಲ್ಲಿ ಅರುಣ, ದಕ್ಷಿಣ ಕನ್ನಡದಲ್ಲಿ ಶ್ರೀನಿವಾಸ ಪೂಜಾರಿಗೆ ಗೆಲುವು

ಕಾರವಾರ/ಶಿವಮೊಗ್ಗ/ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭರ್ಥಿ ಗಣಪತಿ ಉಳ್ವೇಕರ ಅವರು ಗೆಲುವು ಸಾಧಿಸಿದ್ದಾರೆ.
. ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ ಅವರನ್ನು ಸೋಲಿಸಿದ್ದಾರೆ. ಒಟ್ಟ ಚಲಾವಣೆಯಾದ ೨೯೦೭ ಮತಗಳಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ ಅವರು ೧೫೧೪ ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ ಅವರು ೧೩೩೧ ಮತಗಳನ್ನು ಪಡೆದಿದ್ದಾರೆ. ೫೪ ಮತಗಳನ್ನು ತಿರಸ್ಕರಿಸಲಾಗಿದೆ.
ಯಾವ ಅಭ್ಯರ್ಥಿ ಎಷ್ಟು ಮತ ವಿವರ ಇಲ್ಲಿದೆ

ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಗೆಲುವು
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ ಅವರು ಕಾಂಗ್ರೆಸ್‌ ಅಭ್ಯರ್ಥಿ ಪ್ರಸನ್ನಕುಮಾರ ಅವರನ್ನು ಸೋಲಿಸಿ ಆಯ್ಕೆಯಾಗಿದ್ದಾರೆ. ಡಿ.ಎಸ್‌.ಅರುಣ ಅವರು ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರ ಪುತ್ರ.
ದ್ವಿ ಸದಸ್ಯ ಕ್ಷೇತ್ರವಾದ ದಕ್ಷಿಣ ಕನ್ನಡದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಯ್ಕೆಯಾಗಿದ್ದಾರೆ.ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ೩೬೯೩ ಮತ ಪಡೆದು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನ ಮಂಜುನಾಥ ಭಂಡಾರಿ ೨೦೭೭ ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement