ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ, ದೇಹದಾನಕ್ಕೆ ನಿರ್ಧಾರ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಖ್ಯಾತ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ಮಗಳ ಮನೆಗೆ ಆಗಮಿಸಿದ್ದರು.
1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಹೊಸ ಬಡಾವಣೆಯಲ್ಲಿ ಸಾಮಾನ್ಯ ಕುಟುಂಬದಲ್ಲಿ ರಾಜೇಶ್ವರಿ ತೇಜಸ್ವಿ ಜನಿಸಿದ್ದರು. ಹೆಣ್ಣುಮಕ್ಕಳಿಗೂ ಸಮಾನ ವಿದ್ಯಾಭ್ಯಾಸ ಕೊಡಬೇಕೆನ್ನುವ ಅವರ ತಂದೆಯ ಧ್ಯೇಯದಿಂದಾಗಿ ರಾಜೇಶ್ವರಿಯವರು ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ. ಮಾಡಲು ಮೈಸೂರು ಮಾನಸ ಗಂಗೋತ್ರಿಗೆ ಬಂದರು. ಅಲ್ಲೇ ತೇಜಸ್ವಿಯವರ ಪರಿಚಯವಾ ಪ್ರೀತಿಗೆ ತಿರುಗಿತು. ಆನಂತರ 1966ರಲ್ಲಿ ಪೂರ್ಣಚಂದ್ರ ತೇಜಸ್ವಿರನ್ನು ವಿವಾಹವಾದರು.
ರಾಜೇಶ್ವರಿ ತೇಜಸ್ವಿ ಅವರು ‘ನನ್ನ ತೇಜಸ್ವಿ’ ಮತ್ತು ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಪುಸ್ತಕಗಳನ್ನು ಬರೆದಿದ್ದಾರೆ. ‘ನನ್ನ ತೇಜಸ್ವಿ’ ರಾಜೇಶ್ವರಿ ತೇಜಸ್ವಿ ಅವರ ಮೊಟ್ಟ ಮೊದಲ ಪುಸ್ತಕವಾಗಿದ್ದು, ಇದು ಒಟ್ಟು ಐದನೇ ಮುದ್ರಣ ಕಂಡಿದೆ. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ರಾಜೇಶ್ವರಿಯವರ ಎರಡನೆ ಪುಸ್ತಕವಾಗಿದೆ. ಪೂರ್ಣಚಂದ್ರ ತೇಜಸ್ವಿ ಹಾಗೂ ರಾಜೇಶ್ವರಿ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಇಬ್ಬರೂ ಸಾಫ್ಟ್‌ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ‌. ನಂತರ ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

 

 

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement