ಚೆನ್ನೈ: ನಟ ಅರ್ಜುನ್ ಸರ್ಜಾ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಾನು ಈಗ ಚೆನ್ನಾಗಿದ್ದೇನೆ. ನೀವೆಲ್ಲರೂ ಮಾಸ್ಕ್ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್ ಕಿ ಜೈ ಎಂದು ತಮ್ಮ ಇನ್‍ಸ್ಟಾಗ್ರಾಮ್ ಮೂಲಕವಾಗಿ ಅರ್ಜುನ್ ಸರ್ಜಾ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ