ಭಾರತೀಯ ಭದ್ರತಾ ಪಡೆಗಳ ಮೇಲೆ ದಾಳಿ ಹೊಣೆ ಹೊತ್ತಿದ್ದ ಪಾಕಿಸ್ತಾನಿ ಉಗ್ರ ಹತ

ಪೂಂಚ್: ಪಾಕಿಸ್ತಾನದ ಉಗ್ರ ಅಬು ಜರಾರ್‌ನನ್ನು ಭಾರತೀಯ ಭದ್ರತಾ ಪಡೆಗಳು ಇಂದು, ಮಂಗಳವಾರ ಹೊಡೆದುರುಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ನಡೆಸುವ ಜವಾಬ್ದಾರಿಯನ್ನು ಜರಾರ್ ವಹಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಆಗಸ್ಟ್‌ನಲ್ಲಿ ಪೂಂಚ್ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಪಾಕಿಸ್ತಾನಿ ಪ್ರಜೆ ಜರಾರ್
ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ನಡೆಸುವುದರ ಹೊರತಾಗಿ ರಜೌರಿ-ಪೂಂಚ್ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತೆ ಗಟ್ಟಿಗೊಳಿಸುವ ಜವಾಬ್ದಾರಿ ಹೊಂದಿದ್ದ. ಅಬು ಜರಾರ್‌ನನ್ನು ಹತ್ಯೆ ಮಾಡಿರುವುದು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಬು ಜರಾರ್ ಪೂಂಚ್-ರಜೌರಿ ಬೆಲ್ಟ್‌ನ ನಿಯಂತ್ರಣ ರೇಖೆಯ ಬಳಿ ಹತ್ಯೆಗೀಡಾದ ಎಂಟನೇ ಭಯೋತ್ಪಾದಕ. ಕಳೆದ ತಿಂಗಳು ಭದ್ರತಾ ಪಡೆಗಳು ಭಯೋತ್ಪಾದಕ-ಮಾರ್ಗದರ್ಶಿ ಹಾಜಿ ಆರಿಫ್​ನನ್ನು ಹೊಡೆದುರುಳಿಸಿದ್ದವು. ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಪ್ರಯತ್ನದಲ್ಲಿ ಸ್ಥಳೀಯರು ಶಂಕಿತರ ಚಲನವಲನದ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಒದಗಿಸಿದಾಗ ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಅವರ ಮೊಬೈಲ್​ ಮಾತುಕತೆಯ ಮೇಲೆ ನಿಗಾ ಇಡಲಾಯಿತು ಎಂದು ಅವರು ಹೇಳಿದ್ದಾರೆ.
ಇಂದು ನಡೆದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸುವ ಮೂಲಕ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ, ಮೋಸ್ಟ್​ ವಾಂಟೆಡ್ ಉಗ್ರನನ್ನು ಈ ವೇಳೆ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದೆ. ಆದರೆ ಅವನ ಸಹಚರನು ಪರಾರಿಯಾಗಿದ್ದಾನೆ. ಅವನಿಗಾಗಿ ಶೋಧ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement